ಭಾನುವಾರ, ಜುಲೈ 3, 2022
28 °C

ದೆಹಲಿಯಲ್ಲಿ 1,607 ಕೋವಿಡ್ ಪ್ರಕರಣ ಪತ್ತೆ: ಪಾಸಿಟಿವಿಟಿ ದರ ಶೇ 5.28ಕ್ಕೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯಲ್ಲಿ 24 ಗಂಟೆ ಅವಧಿಯಲ್ಲಿ 1,607 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಪಾಸಿಟಿವಿಟಿ ದರ ಶೇ 5.28ಕ್ಕೆ ಏರಿಕೆಯಾಗಿದೆ ಎಂದು ನಗರ ಆರೋಗ್ಯ ಇಲಾಖೆ ಶನಿವಾರ ತಿಳಿಸಿದೆ.

3,863 ಮಂದಿ ಸೋಂಕಿತರು ಮನೆಯಲ್ಲೇ ಪ್ರತ್ಯೇಕ ವಾಸದಲ್ಲಿದ್ದಾರೆ ಎಂದು ಇಲಾಖೆ ತಿಳಿಸಿದೆ.

ಇದರೊಂದಿಗೆ ರಾಷ್ಟ್ರ ರಾಜಧಾನಿಯಲ್ಲಿ ಈವರೆಗಿನ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 18,81,555ಕ್ಕೆ ಏರಿಕೆಯಾಗಿದ್ದು, ಮೃತರ ಸಂಖ್ಯೆ 26,174 ತಲುಪಿದೆ.

ದೆಹಲಿಯಲ್ಲಿ ಗುರುವಾರ 1,490 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದವು. ಇಬ್ಬರು ಸೋಂಕಿತರು ಮೃತಪಟ್ಟಿದ್ದರು. ಪಾಸಿಟಿವಿಟಿ ದರ ಶೇ 4.62ರಷ್ಟಿತ್ತು. ಒಟ್ಟು 30,459 ಕೋವಿಡ್ ಪರೀಕ್ಷೆ ನಡೆಸಲಾಗಿತ್ತು.

ದೆಹಲಿಯಲ್ಲಿ ಈ ವರ್ಷ ಜನವರಿ 13ರಂದು ಗರಿಷ್ಠ, ಅಂದರೆ 28,867 ಕೋವಿಡ್ ಪ್ರಕರಣಗಳು ವರದಿಯಾಗಿದ್ದವು. ಕೋವಿಡ್ ಮೂರನೇ ಅಲೆಯ ಸಂದರ್ಭ, ಜನವರಿ 14ರಂದು ಪಾಸಿಟಿವಿಟಿ ಪ್ರಮಾಣ ಶೇ 30.6ರಷ್ಟಿತ್ತು.

ದೇಶದಾದ್ಯಂತ ಶನಿವಾರ ಬೆಳಿಗ್ಗೆ ಕೊನೆಗೊಂಡಂತೆ 24 ಗಂಟೆ ಅವಧಿಯಲ್ಲಿ 3,688 ಹೊಸ ಕೋವಿಡ್‌ ಪ್ರಕರಣಗಳು ಪತ್ತೆಯಾಗಿವೆ. 50 ಮಂದಿ ಸೋಂಕಿತರು ಮೃತಪಟ್ಟಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 0.74ಕ್ಕೆ ತಲುಪಿದೆ. ಇದು ಶುಕ್ರವಾರ ಶೇ 0.71 ಇತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು