ಸೋಮವಾರ, ಮೇ 23, 2022
28 °C

ದೆಹಲಿ ಗಲಭೆ: ಮೇ 19 ರಂದು ಉಮರ್‌ ಖಾಲೀದ್‌ ಜಾಮೀನು ಅರ್ಜಿ ವಿಚಾರಣೆ

ಪಿಟಿಐ Updated:

ಅಕ್ಷರ ಗಾತ್ರ : | |

dh file

ನವದೆಹಲಿ (ಪಿಟಿಐ): ಫೆಬ್ರುವರಿ 2020ರಲ್ಲಿ ನಡೆದ ದೆಹಲಿ ಗಲಭೆ ಆರೋಪಕ್ಕೆ ಸಂಬಂಧಿಸಿದಂತೆ ಯುಎಪಿಎ ಪ್ರಕರಣದಲ್ಲಿ ಜಾಮೀನು ಕೋರಿ ಜೆಎನ್‌ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಸಲ್ಲಿಸಿದ ಮನವಿಯನ್ನು ದೆಹಲಿ ಹೈಕೋರ್ಟ್ ಶುಕ್ರವಾರ ಮೇ 19 ರಂದು ವಿಚಾರಣೆಗೆ ಪಟ್ಟಿ ಮಾಡಿದೆ.

ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಟ್ನಾಗರ್ ಅವರ ಪೀಠವು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಮೇ 24 ಕ್ಕೆ ಮುಂದೂಡಿದೆ.

ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ರಾಷ್ಟ್ರೀಯ ಪೌರತ್ವ ನೋಂದಣಿ ವಿರುದ್ಧ ನಡೆದ ಪ್ರತಿಭಟನೆ ವೇಳೆ ಹಿಂಸಾಚಾರ ಭುಗಿಲೆದ್ದಿತ್ತು.

ದೆಹಲಿ ಗಲಭೆಯ ಸಂಚುಕೋರರೆಂದು ಯುಎಪಿಎ ಪ್ರಕರಣದಲ್ಲಿ ಉಮರ್ ಖಾಲಿದ್, ಶಾರ್ಜೀಲ್‌ ಇಮಾಮ್ ಮತ್ತು ಇತರರ ವಿರುದ್ಧ ಭಯೋತ್ಪಾದನಾ-ವಿರೋಧಿ ಕಾನೂನಿನಡಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು ಈ ಗಲಭೆಯಲ್ಲಿ 53 ಜನ ಮೃತಪಟ್ಟಿದ್ದು 700ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು