ಭಾನುವಾರ, ಆಗಸ್ಟ್ 14, 2022
28 °C

ದೆಹಲಿ ಗಲಭೆ: ಮೂವರು ವಿದ್ಯಾರ್ಥಿಗಳ ಬಿಡುಗಡೆಗೆ ಕೋರ್ಟ್‌ ಸೂಚನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಈಶಾನ್ಯ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ವಿದ್ಯಾರ್ಥಿಗಳಾದ ನತಾಶಾ ನರ್ವಾಲ್‌, ದೇವಾಂಗನಾ ಕಾಲಿತಾ ಹಾಗೂ ಆಸಿಫ್‌ ಇಕ್ಬಾಲ್‌ ತನ್ಹಾ ಅವರನ್ನು ತಕ್ಷಣವೇ ಬಿಡುಗಡೆಗೊಳಿಸಬೇಕೆಂದು ದೆಹಲಿ ನ್ಯಾಯಾಲಯವು ಗುರುವಾರ ಸೂಚಿಸಿದೆ.

ದೆಹಲಿ ಗಲಭೆಗೆ ಸಂಬಂಧಿಸಿದಂತೆ ಕಳೆದ ವರ್ಷ ಮೇ ತಿಂಗಳಿನಲ್ಲಿ ಈ ಮೂವರನ್ನು ಬಂಧಿಸಲಾಗಿತ್ತು. ಎರಡು ದಿನಗಳ ಹಿಂದೆ ಇವರಿಗೆ ದೆಹಲಿ ಹೈಕೋರ್ಟ್‌ ಜಾಮೀನು ನೀಡಿತ್ತು. ಆದರೆ, ಮೂವರು ವಿದ್ಯಾರ್ಥಿಗಳ ಜಾಮೀನು ಮತ್ತು ಮುಚ್ಚಳಿಕೆಗೆ ಸಂಬಂಧಿಸಿದ ದಾಖಲೆಗಳ ಪರಿಶೀಲನೆ ನಿಗದಿತ ಸಮಯದಲ್ಲಿ ಪೂರ್ಣಗೊಳ್ಳದ ಕಾರಣ ಅವರನ್ನು ಬಿಡುಗಡೆ ಮಾಡಿರಲಿಲ್ಲ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು