ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ ಗಲಭೆ: ಶರ್ಜೀಲ್‌ ಇಮಾಮ್ 14 ದಿನಗಳ‌ ನ್ಯಾಯಾಂಗ ಬಂಧನಕ್ಕೆ

Last Updated 3 ಸೆಪ್ಟೆಂಬರ್ 2020, 14:18 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ಫೆಬ್ರುವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಎನ್‌ಯು ವಿದ್ಯಾರ್ಥಿ ಶರ್ಜೀಲ್‌ ಇಮಾಮ್‌ ಅವರನ್ನು ಅಕ್ರಮ ಚಟುವಟಿಕೆ(ನಿಯಂತ್ರಣ) ಕಾಯ್ದೆಯಡಿ(ಯುಎಪಿಎ) 14 ದಿನಗಳ ನ್ಯಾಯಾಂಗ ಬಂಧನಕ್ಕೆ ದೆಹಲಿಯ ನ್ಯಾಯಾಲಯವೊಂದು ಬುಧವಾರ ಆದೇಶಿಸಿದೆ.

ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ಸಂದರ್ಭದಲ್ಲಿ ನಡೆದ ಗಲಭೆಯ ಹಿಂದಿನ ಪಿತೂರಿಯಲ್ಲಿ ಇಮಾಮ್‌ ಭಾಗಿಯಾಗಿದ್ದರು ಎಂಬ ಆರೋಪದಡಿ ದೆಹಲಿ ಪೊಲೀಸ್‌ ವಿಶೇಷ ಘಟಕವು ಆಗಸ್ಟ್‌ 25ರಂದು ಅವರನ್ನು ಬಂಧಿಸಿತ್ತು. ಫೆ.24ರಂದು ಕಾಯ್ದೆಯ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದವರು ಹಾಗೂ ಕಾಯ್ದೆಯ ಪರ ಇದ್ದವರ ನಡುವೆ ನಡೆದಿದ್ದ ಕೋಮುಗಲಭೆಯಲ್ಲಿ 53 ಜನರು ಮೃತಪಟ್ಟಿದ್ದರು, 200ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT