ಶನಿವಾರ, ಮಾರ್ಚ್ 25, 2023
25 °C

ದೆಹಲಿ ಗಲಭೆ: 10 ಸಾವಿರ ಪುಟದ ದೋಷಾರೋಪ ಪಟ್ಟಿ ಸಲ್ಲಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ದೆಹಲಿಯಲ್ಲಿ ಈ ವರ್ಷದ ಫೆಬ್ರುವರಿಯಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ಸುಮಾರು10 ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. 

15 ಜನರ ವಿರುದ್ಧ ಗಲಭೆಗೆ ಸಂಚು ನಡೆಸಿದ್ದಕ್ಕೆ ಸಂಬಂಧಿಸಿದಂತೆ ಕಾನೂನುಬಾಹಿರ ಚಟುವಟಿಕೆ ನಿಯಂತ್ರಣ ಕಾಯ್ದೆ (ಯುಎಪಿಎ)ಯ ವಿವಿಧ ಸೆಕ್ಷನ್‌ಗಳ ಅನ್ವಯ ಪ್ರಕರಣ ದಾಖಲಿಸಲಾಗಿದೆ. ಮೊಬೈಲ್ ಕರೆ ದಾಖಲೆ, ವಾಟ್ಸ್ ಆ್ಯಪ್ ಸಂವಹನವನ್ನು ಆಧರಿಸಲಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

ಒಟ್ಟು 747 ಜನರ ಸಾಕ್ಷ್ಯಗಳ ಪಟ್ಟಿಯನ್ನು ಪೊಲೀಸರು ಮಾಡಿದ್ದು, ಈ ಪೈಕಿ 51 ಜನರು ತಮ್ಮ ಹೇಳಿಕೆಯನ್ನು ದಾಖಲಿಸಿದ್ದಾರೆ. ಸಿಎಎ ಬೆಂಬಲಿಗರು ಮತ್ತು ವಿರೋಧ ಮಾಡುತ್ತಿದ್ದವರ ನಡುವೆ  ಫೆಬ್ರುವರಿ ತಿಂಗಳಲ್ಲಿ ನಡೆದಿದ್ದ ಗಲಭೆಯಲ್ಲಿ ಸುಮಾರು 53 ಜನರು ಸತ್ತಿದ್ದು, 200 ಮಂದಿ ಗಾಯಗೊಂಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು