ಶನಿವಾರ, ಜುಲೈ 2, 2022
22 °C

ದೆಹಲಿ ಹಿಂಸಾಚಾರ: ಉಮರ್ ಖಾಲಿದ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್‌

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: 2020ರಲ್ಲಿ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಪಿತೂರಿ ನಡೆಸಿರುವ ಆರೋಪದಲ್ಲಿ ಕಾನೂನು ಬಾಹಿರ ಚಟುವಟಿಕೆ ತಡೆ ಕಾಯ್ದೆ (ಯುಎಪಿಎ) ಅಡಿಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಉಮರ್‌ ಖಾಲಿದ್‌ ಅವರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆಯನ್ನು ದೆಹಲಿ ಹೈಕೋರ್ಟ್‌ ಮೇ 6ಕ್ಕೆ ಮುಂದೂಡಿದೆ.

ದೇಶದ್ರೋಹದ ಕಾನೂನಿನ ಸಾಂವಿಧಾನಿಕ ಸಿಂಧುತ್ವದ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿರುವ ಕಾರಣ ಜಾಮೀನು ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‌ ಮುಂದೂಡಿದೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾರ್ಜೀಲ್‌ ಇಮಾಮ್ ಅವರ ಜಾಮೀನು ಅರ್ಜಿಯ ಕುರಿತು ನಿಲುವು ಪ್ರಕಟಿಸುವಂತೆ ನ್ಯಾಯಾಲಯವು ದೆಹಲಿ ಪೊಲೀಸರಿಗೆ ಸೂಚನೆ ನೀಡಿದೆ. ವಿಚಾರಣಾ ನ್ಯಾಯಾಲಯವು ಜಾಮೀನು ಅರ್ಜಿ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಶಾರ್ಜೀಲ್‌ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿದ್ಧಾರ್ಥ್ ಮೃದುಲ್‌ ನೇತೃತ್ವದ ನ್ಯಾಯಪೀಠವು ನೋಟಿಸ್‌ ಜಾರಿ ಮಾಡಿದೆ.

ಖಾಲಿದ್‌ ಮತ್ತು ಶಾರ್ಜೀಲ್‌ ಅವರು ಈ ಪ್ರಕರಣದಲ್ಲಿ ಆರೋಪಿಗಳು, ಈ ಕಾರಣಕ್ಕಾಗಿ ಇಬ್ಬರ ಜಾಮೀನು ಅರ್ಜಿಯ ವಿಚಾರಣೆ ಒಟ್ಟಿಗೆ ನಡೆಯಲಿದೆ ಎಂದೂ ನ್ಯಾಯಪೀಠ ಹೇಳಿದೆ.

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಇನ್ನೊಂದು ಪ್ರಕರಣದಲ್ಲಿ ಜಾಮೀನು ಕೋರಿ ಶಾರ್ಜೀಲ್‌ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನೂ ನ್ಯಾಯಾಲಯ ಮೇ 6ಕ್ಕೆ ನಿಗದಿ ಪಡಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು