ನವದೆಹಲಿ: ದೆಹಲಿಯಲ್ಲಿ ಮಂಗಳವಾರ ಶೀತ ಅಲೆ ಪರಿಸ್ಥಿತಿ ನಿರ್ಮಾಣವಾಗಿದ್ದು, ಕನಿಷ್ಠ ತಾಪಮಾನವು 3.6 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಸೋಮವಾರ ಕನಿಷ್ಠ ತಾಪಮಾನ 5.6 ಡಿಗ್ರಿ ಸೆಲ್ಸಿಯಸ್ ಇತ್ತು. ಆದರೆ ಮಂಗಳವಾರ ತಾಪಮಾನವು 3.6 ಡಿಗ್ರಿ ಸೆಲ್ಸಿಯಸ್‌ಗೆ ಇಳಿದಿದೆ.ಆಯಾನಗರ ಮತ್ತು ಲೋಧಿ ರಸ್ತೆಯಲ್ಲಿ ಕ್ರಮವಾಗಿ 2.6 ಮತ್ತು 2.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಸಫ್ದರ್ಜಂಗ್ ವೀಕ್ಷಣಾಲಯವು ಹೇಳಿದೆ.
ನಗರದಲ್ಲಿ ಮುಂದಿನ ಮೂರು ದಿನಗಳವರೆಗೆ ಶೀತ ಅಲೆಯ ಪರಿಸ್ಥಿತಿ ಇರುವ ಸಾಧ್ಯತೆಯಿದೆ ಎಂದು ಐಎಂಡಿ ಮುನ್ನೆಚ್ಚರಿಕೆ ನೀಡಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.