ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿ: ಕಟ್ಟಡ ಕುಸಿದು ಅಣ್ಣ–ತಮ್ಮ ಸಾವು

Last Updated 13 ಸೆಪ್ಟೆಂಬರ್ 2021, 14:31 IST
ಅಕ್ಷರ ಗಾತ್ರ

ನವದೆಹಲಿ: ಉತ್ತರ ದೆಹಲಿಯ ಸಬ್ಜಿ ಮಂಡಿ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡವೊಂದು ಕುಸಿದು ಅಣ್ಣ– ತಮ್ಮ ಮೃತಪಟ್ಟಿದ್ದಾರೆ.

ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ 7 ಮತ್ತು 12 ವರ್ಷದ ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆಸ್ಪತ್ರೆಯಲ್ಲಿಯೇ ಮೃತಪಟ್ಟಿದ್ದಾರೆ. ಈ ಮಕ್ಕಳು ತಾಯಿಯ ಜೊತೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಕಟ್ಟಡ ಕುಸಿದು, ಅವಶೇಷಗಳಡಿ ಸಿಲುಕಿಕೊಂಡಿದ್ದರು.

ಅವಶೇಷಗಳಡಿ ಸಿಲುಕಿದ್ದ 72 ವರ್ಷದ ವೃದ್ಧರೊಬ್ಬರನ್ನು ರಕ್ಷಿಸಲಾಗಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ. ಅವರ ತಲೆಗೆ ಪೆಟ್ಟು ಬಿದ್ದಿದೆ. ಇನ್ನು ಮೂರರಿಂದ ನಾಲ್ಕು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಟ್ಟಡದ ಬಳಿಯೇ ನಿಲ್ಲಿಸಿದ್ದ ಹಲವು ಕಾರುಗಳು ಹಾನಿಗೊಂಡಿವೆ. ಎಂಸಿಡಿ ಮತ್ತು ಎನ್‌ಆರ್‌ಡಿಎಫ್‌ ತಂಡ ರಕ್ಷಣಾ ಕಾರ್ಯಾಚರಣೆ ನಡೆಸಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT