ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೆಹಲಿಯಲ್ಲಿ ಲಾಕ್‌ಡೌನ್‌ ನಿರ್ಬಂಧಗಳು ಮತ್ತಷ್ಟು ಸಡಿಲ

Last Updated 13 ಜೂನ್ 2021, 8:42 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕಾಗಿ ವಿಧಿಸಿರುವ ನಿರ್ಬಂಧಗಳನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದ ಶೇಕಡ 50ರಷ್ಟು ಸಾಮರ್ಥ್ಯದೊಂದಿಗೆ ರೆಸ್ಟೊರೆಂಟ್‌ಗಳು ಕಾರ್ಯನಿರ್ವಹಿಸಬಹುದು. ಅಲ್ಲದೆಪ್ರತಿ ಪುರಸಭೆ ವಲಯದಲ್ಲಿ ಒಂದು ಮಾರುಕಟ್ಟೆಯನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಭಾನುವಾರ ತಿಳಿಸಿದರು.

‘ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ, ಧಾರ್ಮಿಕ ಉತ್ಸವಗಳನ್ನು ನಡೆಸಲು,ಶಾಲಾ–ಕಾಲೇಜುಗಳು, ಶೈಕ್ಷಣಿಕ ಮತ್ತು ತರಬೇತಿ ಸಂಸ್ಥೆಗಳು, ಚಿತ್ರಮಂದಿರಗಳು, ಮೆಲ್ಪಿಪ್ಲೆಕ್ಸ್‌, ಈಜುಕೊಳಗಳು, ಜಿಮ್‌ಗಳು, ಸಾರ್ವಜನಿಕ ಉದ್ಯಾನಗಳನ್ನು ತೆರೆಯಲು ಅವಕಾಶ ನೀಡಿಲ್ಲ. ನಗರದಲ್ಲಿ ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಆದರೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ’ ಎಂದು ಅವರು ಹೇಳಿದರು.

ಮಾಲ್‌ಗಳು, ಮಾರುಕಟ್ಟೆ ಮಳಿಗೆಗಳು ಸೋಮವಾರದಿಂದ ಸಮ–ಬೆಸ ಸಂಖ್ಯೆಯ ಆಧಾರದಲ್ಲಿ ಬೆಳಿಗ್ಗೆ 10ರಿಂದ ರಾತ್ರಿ 8ರವರೆಗೆ ಕಾರ್ಯನಿರ್ವಹಿಸಲಿವೆ.

‘ದೆಹಲಿಯಲ್ಲಿ ಕೋವಿಡ್‌ ಪ್ರಕರಣಗಳು ಗಣನೀಯವಾಗಿ ಇಳಿಕೆಯಾಗಿವೆ. ಒಂದು ವೇಳೆ ಪ್ರಕರಣಗಳು ಏರಿಕೆಯಾದರೆ, ಮತ್ತೆ ಕಠಿಣ ನಿರ್ಬಂಧಗಳನ್ನು ಹೇರಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT