ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕ್ಷೇತ್ರ ಪುನರ್ ವಿಂಗಡಣೆ ಪ್ರಸ್ತಾವನೆ ಬಿಜೆಪಿ ಕಾರ್ಯಸೂಚಿಯಂತಿದೆ: ಮುಫ್ತಿ

Last Updated 7 ಫೆಬ್ರುವರಿ 2022, 13:29 IST
ಅಕ್ಷರ ಗಾತ್ರ

ಶ್ರೀನಗರ: ‘ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರ ಪುನರ್ ವಿಂಗಡಣಾ ಆಯೋಗದ ಪ್ರಸ್ತಾವನೆಯು ಬಿಜೆಪಿಯ ಕಾರ್ಯಸೂಚಿಯಂತಿದ್ದು, ಆಯೋಗದ ಕರಡು ವರದಿಯು ನಮಗೆ ಯಾವುದೇ ಆಶ್ಚರ್ಯವನ್ನು ತಂದಿಲ್ಲ. ಇದೊಂದು ಪ್ರಜಾಪ್ರಭುತ್ವದ ಮೇಲಿನ ಮತ್ತೊಂದು ದಾಳಿ' ಎಂದು ಮಾಜಿ ಮುಖ್ಯಮಂತ್ರಿ ಮತ್ತು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಆರೋಪಿಸಿದರು.

ಇಲ್ಲಿನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಜೋರಿ, ಚೆನಾಬ್ ಕಣಿವೆಯಲ್ಲಿ ಬಹುಸಂಖ್ಯಾತ ಸಮುದಾಯಗಳನ್ನು ದುರ್ಬಲಗೊಳಿಸಲು ಬಿಜೆಪಿ ಬಯಸಿದೆ. ಅನಂತನಾಗ್ ಲೋಕಸಭಾ ಕ್ಷೇತ್ರವನ್ನು ಜಮ್ಮು ಪ್ರದೇಶಗಳೊಂದಿಗೆ ವಿಲೀನಗೊಳಿಸಲು ಮುಂದಾಗಿದ್ದು, ಇದರಿಂದ ಕಣಿವೆಯ ಮತದಾರರು ಅಪ್ರಸ್ತುತರಾಗುತ್ತಾರೆ. 6 ತಿಂಗಳವರೆಗೆ ಕಣಿವೆಯ ಹೆದ್ದಾರಿ ಬಂದ್‌ ಆಗಿರುತ್ತದೆ. ಇಂತಹ ಸಂದರ್ಭದಲ್ಲಿ ಕಣಿವೆ ಪ್ರದೇಶದ ಜನರು ರಾಜೌರಿ ಹಾಗೂ ಚೆನಾಬ್‌ ಕಣಿವೆಯನ್ನು ತಲುಪುವುದು ಹೇಗೆ’ ಅವರು ಎಂದು ಪ್ರಶ್ನಿಸಿದರು.

ಕಾಶ್ಮೀರದಲ್ಲಿ ಪತ್ರಕರ್ತರ ಬಂಧನದ ಕುರಿತು ಪ್ರತಿಕ್ರಿಯಿಸಿದ ಮೆಹಬೂಬಾ ಮುಫ್ತಿ, ‘ಸರ್ಕಾರ ಕಣಿವೆಯಲ್ಲಿ ಪ್ರತಿಯೊಂದು ಭಿನ್ನಾಭಿಪ್ರಾಯವನ್ನು ಹತ್ತಿಕ್ಕುತ್ತಿದೆ. ಕೆಲ ದಿನಗಳ ಹಿಂದೆ ಪತ್ರಕರ್ತ ಫಹಾದ್‌ನನ್ನು ಬಂಧಿಸಲಾಗಿದೆ. ಈ ಹಿಂದೆ ಸಜಾದ್ ಗುಲ್ ಅವರನ್ನು ಬಂಧಿಸಲಾಗಿತ್ತು. ಮತ್ತಷ್ಟು ಪತ್ರಕರ್ತರಿಗೆ ಸಮನ್ಸ್‌ ನೀಡಿದೆ’ ಎಂದು ಅವರು ಹೇಳಿದರು.

‘ಹಿಂದೂ ಮತ್ತು ಮುಸ್ಲಿಂ ಸಮುದಾಯವನ್ನು ವಿಭಜಿಸಲು ಬಿಜೆಪಿಯು ಗೋಡ್ಸೆ ಕಾರ್ಯಸೂಚಿಯನ್ನು ಕಾರ್ಯಗತಗೊಳಿಸುತ್ತಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರಜಾಪ್ರಭುತ್ವ ಸತ್ತು ಹೋಗಿದೆ.ಹಾಗಾಗಿ ಇಲ್ಲಿ ಯಾರಿಗೂ ಮಾತನಾಡಲು ಅವಕಾಶವಿಲ್ಲ. ಕ್ಷೇತ್ರ ಪುನರ್‌ ವಿಂಗಡಣ ಆಯೋಗದ ವರದಿ ವಿರುದ್ಧ ಮಾತನಾಡಿದ ಪಕ್ಷದ ಜಿಲ್ಲಾಧ್ಯಕ್ಷರನ್ನು ಬಂಧಿಸಿ ಬಿಡುಗಡೆ ಮಾಡಲಾಗಿದೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT