ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭೆ, ವಿಧಾನಸಭೆಗೆ ಏಕಕಾಲದಲ್ಲಿ ಚುನಾವಣೆಗೆ ಒತ್ತಾಯ

Last Updated 24 ಮಾರ್ಚ್ 2022, 11:28 IST
ಅಕ್ಷರ ಗಾತ್ರ

ನವದೆಹಲಿ: ದೇಶದ ರಾಷ್ಟ್ರೀಯ ಸಂಪನ್ಮೂಲಗಳ ವೆಚ್ಚ ತಡೆಯುವ ಸಲುವಾಗಿ ಲೋಕಸಭೆ, ರಾಜ್ಯಗಳ ವಿಧಾನಸಭೆ ಹಾಗೂ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಏಕಕಾಲದಲ್ಲಿನಡೆಸಬೇಕೆಂದು ಗುರುವಾರ ರಾಜ್ಯಸಭೆಯಲ್ಲಿ ಒತ್ತಾಯಿಸಲಾಗಿದೆ.

ಶೂನ್ಯ ವೇಳೆಯಲ್ಲಿ ಈ ಬಗ್ಗೆ ಪ್ರಸ್ತಾಪಿಸಿದ ಬಿಜೆಪಿ ಸದಸ್ಯ ದೇವೇಂದರ್ ಪೌಲ್ ವಾಟ್ಸ್ ಅವರು, 'ದೇಶದಾದ್ಯಂತ ಒಂದಲ್ಲಾ ಒಂದು ರಾಜ್ಯಗಳ ಚುನಾವಣೆ ನಡೆಯುತ್ತಲೇ ಇರುತ್ತದೆ. ಹೀಗಾಗಿ ವರ್ಷ ಪೂರ್ತಿ ಚುನಾವಣೆಗಳು ನಡೆಯುತ್ತಲೇ ಇವೆ. ಇದರಿಂದ ಸಂಪನ್ಮೂಲಗಳ ಮೇಲೆ ಹೆಚ್ಚಿನ ಹೊರೆಯಾಗುತ್ತಿದೆ' ಎಂದು ಹೇಳಿದ್ದಾರೆ.

ಇದಕ್ಕಾಗಿ ರಾಜ್ಯಗಳ ವಿಧಾನಸಭೆಯ ಅವಧಿಯನ್ನು ವಿಸ್ತರಿಸಬೇಕು ಎಂದು ಸಲಹೆ ನೀಡಿದ ಅವರು,ಈ ಕುರಿತು ಒಂದು ಒಮ್ಮತಕ್ಕೆ ಬರಬೇಕು. ಇದರಿಂದ ಲೋಕಸಭೆ, ವಿಧಾನಸಭೆ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಒಟ್ಟಿಗೆ ನಡೆಸಬಹುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT