ಅಮೆರಿಕ: ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಅಗತ್ಯ –ಮೋದಿ

ನವದೆಹಲಿ: ಕಾನೂನುಬಾಹಿರವಾಗಿ ಪ್ರತಿಭಟನೆಗಳನ್ನು ನಡೆಸುವುದರಿಂದ ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪ್ರಕ್ರಿಯೆಗಳಿಗೆ ತಡೆಯೊಡ್ಡಲಾಗದು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ವಾಷಿಂಗ್ಟನ್ ಡಿ.ಸಿ ಬಳಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಬೆಂಬಲಿಗರು ನಡೆಸಿದ ಹಿಂಸಾಚಾರವನ್ನು ಉಲ್ಲೇಖಿಸಿ ಅವರು ಈ ಮಾತು ಹೇಳಿದ್ದಾರೆ.
ನಿಯಮಾನುಸಾರ ಮತ್ತು ಶಾಂತಿಯುತವಾಗಿ ಅಧಿಕಾರ ಹಸ್ತಾಂತರ ಪ್ರಕ್ರಿಯೆ ನಡೆಯಬೇಕಾಗಿದೆ ಎಂದು ಈ ಕುರಿತು ಮಾಡಿದ ಟ್ವೀಟ್‌ನಲ್ಲಿ ಅವರು ಅಭಿಪ್ರಾಯಪಟ್ಟಿದ್ದಾರೆ.
ವಾಷಿಂಗ್ಟನ್ ಡಿ.ಸಿಯಲ್ಲಿ ನಡೆದ ಹಿಂಸಾಚಾರ ಮತ್ತು ಗದ್ದಲವನ್ನು ಗಮನಿಸಿದರೆ ಬೇಸರವಾಗುತ್ತದೆ. ಇಂಥ ಕ್ರಮಗಳಿಂದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಹತ್ತಿಕ್ಕಲಾಗದು ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.