ಶನಿವಾರ, ಜೂನ್ 25, 2022
25 °C

ನೋಟು ರದ್ಧತಿಯಿಂದ ದೇಶದ ಆರ್ಥಿಕತೆ ನಾಶ: ಕಾಂಗ್ರೆಸ್‌, ಟಿಎಂಸಿ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ: ದೇಶದಲ್ಲಿ ಚಲಾವಣೆಯಲ್ಲಿ ಇರುವ ₹ 2 ಸಾವಿರ ಮುಖಬೆಲೆಯ ನೋಟುಗಳ ಸಂಖ್ಯೆ ನಿಧಾನವಾಗಿ ಕಡಿಮೆ ಆಗುತ್ತಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್‌ (ಆರ್‌ಬಿಐ) ಹೇಳಿಕೆ ನೀಡರುವ ಬೆನ್ನಲೇ ಕಾಂಗ್ರೆಸ್‌ ಮತ್ತು ತೃಣಮೂಲ ಕಾಂಗ್ರೆಸ್‌ ಪಕ್ಷಗಳು ಕೇಂದ್ರ ಸರ್ಕಾರವನ್ನು ಟೀಕಿಸಿವೆ. 

ಆರ್‌ಬಿಐ ವರದಿಯನ್ನು ಪ್ರಸ್ತಾಪ ಮಾಡಿರುವ ಕಾಂಗ್ರೆಸ್‌ ಮತ್ತು ಟಿಎಂಸಿ ಪಕ್ಷಗಳು ದೇಶದಲ್ಲಿ ₹ 2000 ಹಾಗೂ ₹ 500 ಮುಖಬೆಲೆಯ ಖೋಟಾ ನೋಟುಗಳಲ್ಲಿ ಏರಿಕೆಯಾಗಿವೆ ಎಂದು ಗಂಭೀರ ಆರೋಪ ಮಾಡಿವೆ. 

ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ನೋಟು ರದ್ದತಿ ಮಾಡಿದ್ದು ದೇಶದ ಆರ್ಥಿಕತೆ ನಾಶಪಡಿಸಲು ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಆರೋಪ ಮಾಡಿದ್ದಾರೆ. 

ದೇಶದಲ್ಲಿ ನಕಲಿ ನೋಟುಗಳು ಹೆಚ್ಚಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ ಎಂದು ಆರ್‌ಬಿಐ ತಿಳಿಸಿದೆ. ನೋಟು ರದ್ಧತಿಯಿಂದ ಜನ ಸಾಮಾನ್ಯರಿಗೆ ತೊಂದರೆಯಾಯಿತು. ಒಟ್ಟಾರೆ ಕೇಂದ್ರದಿಂದ ದೇಶಕ್ಕೆ ತೊಂದರೆಯಾಯಿತು ವಿನಾ ಪ್ರಯೋಜನವಾಗಲಿಲ್ಲ ಎಂದು ಟಿಎಂಸಿ ನಾಯಕ ಡೆರಿಕ್‌ ಒಬ್ರಿಯಾನ್‌ ಹೇಳಿದ್ದಾರೆ. 

ಚಲಾವಣೆಯಲ್ಲಿ ಇರುವ ಎಲ್ಲಾ ಮುಖಬೆಲೆಯ ನೋಟುಗಳ ಸಂಖ್ಯೆಯು 2022ರ ಮಾರ್ಚ್‌ ಅಂತ್ಯದ ವೇಳೆಗೆ 12,437 ಕೋಟಿಯಿಂದ 13,053 ಕೋಟಿಗೆ ಏರಿಕೆ ಆಗಿದೆ. ಮೌಲ್ಯದ ಲೆಕ್ಕದಲ್ಲಿ ₹ 28.27 ಲಕ್ಷ ಕೋಟಿಯಿಂದ ₹ 31.05 ಲಕ್ಷ ಕೋಟಿಗೆ ಏರಿಕೆ ಆಗಿದೆ ಎಂದು ಆರ್‌ಬಿಐ ಶನಿವಾರ ತಿಳಿಸಿದೆ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು