ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೋಟು ರದ್ದತಿಯಿಂದ ರೈತರು, ಕಾರ್ಮಿಕರು ನಾಶವಾಗಿದ್ದಾರೆ: ಅಶೋಕ್‌ ಗೆಹ್ಲೋಟ್‌

Last Updated 8 ನವೆಂಬರ್ 2020, 13:48 IST
ಅಕ್ಷರ ಗಾತ್ರ

ಜೈಪುರ: ನಾಲ್ಕು ವರ್ಷಗಳ ಹಿಂದೆ ಪ್ರಧಾನಿ ಮೋದಿ ನೋಟು ರದ್ದತಿ ಮಾಡಿದ ನಂತರ, ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳು ನಾಶವಾಗಿದ್ದಾರೆ ಎಂದು ರಾಜಸ್ಥಾನ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ವಾಗ್ದಾಳಿ ನಡೆಸಿದ್ದಾರೆ.

ಈ ವಿಚಾರವಾಗಿ ಮಾತನಾಡಿರುವ ಅವರು, 'ನಾಲ್ಕು ವರ್ಷಗಳ ಹಿಂದೆ ನೋಟು ರದ್ದತಿ ಮಾಡಲಾಯಿತು. ಈ ನಿರ್ಧಾರದಿಂದ ರೈತರು, ಕಾರ್ಮಿಕರು ಮತ್ತು ವ್ಯಾಪಾರಿಗಳು ನಾಶವಾಗಿದ್ದಾರೆ. ಹಣದುಬ್ಬರದ ಕಾರಣ ಗ್ರಾಮೀಣ ಆರ್ಥಿಕತೆಯು ಸಂಪೂರ್ಣವಾಗಿ ಕುಸಿದುಹೋಗಿದೆ' ಎಂದು ಗೆಹ್ಲೋಟ್‌ ಹರಿಹಾಯ್ದಿದ್ದಾರೆ.

ನವೆಂಬರ್‌ 8, 2016 ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆ ನೋಟುಗಳನ್ನು ರದ್ದು ಮಾಡಿ ಆದೇಶ ಹೊರಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT