ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Goa Elections: ಬಿಜೆಪಿಗೆ ಗುಡ್‌ಬೈ ಹೇಳಿದ ಮಾಜಿ ಸಿಎಂ ಲಕ್ಷ್ಮಿಕಾಂತ್ ಪರ್ಸೇಕರ್

Last Updated 22 ಜನವರಿ 2022, 8:27 IST
ಅಕ್ಷರ ಗಾತ್ರ

ಪಣಜಿ: ಮುಂದಿನ ತಿಂಗಳು ಚುನಾವಣೆ ನಡೆಯಲಿರುವ ಗೋವಾದಲ್ಲಿ ಪಕ್ಷಾಂತರ ಬಲು ಜೋರಾಗಿ ನಡೆದಿದೆ. ಏತನ್ಮಧ್ಯೆ ಗೋವಾ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಲಕ್ಷ್ಮಿಕಾಂತ್ ಪರ್ಸೇಕರ್ಅವರು ಬಿಜೆಪಿ ತೊರೆಯುವುದಾಗಿ ಘೋಷಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿರುವ ಅವರು ಈ ವಿಷಯ ಖಚಿತಪಡಿಸಿದ್ದಾರೆ.ಪರ್ಸೇಕರ್ ಮಾಂಡ್ರೆಮ್‌ ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದತೆ ನಡೆಸಿದ್ದರು. ಆದರೆ, ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿರುವುದರಿಂದ ಪಕ್ಷ ತೊರೆಯುತ್ತಿರುವುದಾಗಿ ತಿಳಿದು ಬಂದಿದೆ.

ಇಂದು ಸಂಜೆ ರಾಜೀನಾಮೆ ಪತ್ರವನ್ನು ಸಲ್ಲಿಸುವುದಾಗಿ ತಿಳಿಸಿದ್ದಾರೆ. ಪ್ರಸ್ತುತ ಗೋವಾ ವಿಧಾನಸಭೆ ಚುನಾವಣೆಯ ಬಿಜೆಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಹಾಗೂ ಬಿಜೆಪಿ ಕೋರ್ ಕಮಿಟಿ ಸದಸ್ಯರಾಗಿದ್ದ ಲಕ್ಷ್ಮಿಕಾಂತ್ ‍ಪರ್ಸೆಕರ್ 2002 ರಿಂದ 2017 ರವರೆಗೆಮಾಂಡ್ರೆಮ್‌ ಕ್ಷೇತ್ರ ಪ್ರತಿನಿಧಿಸುತ್ತಾ ಬಂದಿದ್ದರು. 2017 ರಲ್ಲಿ ಸೋತಿದ್ದರು.

ನಾನು ಪಕ್ಷ ತೊರೆಯುವುದಾಗಿ ಮುಖಂಡರಿಗೆ ತಿಳಿಸಿದ್ದು, ಮುಂದೆ ಏನು ಮಾಡಬೇಕು ಎಂಬ ಬಗ್ಗೆ ಇನ್ನೂ ನಿರ್ದಾರ ಕೈಗೊಂಡಿಲ್ಲ ಎಂದು ಅವರು ತಿಳಿಸಿದ್ದಾರೆ.

ಲಕ್ಷ್ಮಿಕಾಂತ್ ‍ಪರ್ಸೇಕರ್ 2014 ರಿಂದ 2017 ರವರೆಗೆ ಗೋವಾ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದರು. ಗೋವಾದ 40 ವಿಧಾನಸಭಾ ಕ್ಷೇತ್ರಗಳಿಗೆ ಫೆಬ್ರುವರಿ 14 ರಂದು ಚುನಾವಣೆ ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT