ಸೋಮವಾರ, ಜನವರಿ 18, 2021
21 °C

ದೆಹಲಿ: ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್‌ಗೆ ಏರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ದೆಹಲಿಯಲ್ಲಿ ಸೋಮವಾರ ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್‌ಗೆ ಏರಿದ್ದು, ನಗರದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.

ಸೋಮವಾರ ಬೆಳಿಗ್ಗೆ 7.30 ರ ಸುಮಾರಿಗೆ ಸಫ್ದರ್‌ಜಂಗ್‌ನಲ್ಲಿ 50 ಮೀಟರ್‌ ಮತ್ತು ಪಾಲಂನಲ್ಲಿ 150 ಮೀಟರ್‌ ಅಂತರದವರೆಗೆ ಕಾಣಿಸದಷ್ಟ ಮಂಜು ಕವಿದಿತ್ತು ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.

ಸೋಮವಾರ ಕನಿಷ್ಠ ತಾಪಮಾನ 11.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿತ್ತು. ಇದು ಕಳೆದ 22 ದಿನಗಳಿಗೆ ಹೋಲಿಸಿದರೆ ಗರಿಷ್ಠ ತಾಪಮಾನವಾಗಿದೆ ಎಂದು ಸಫ್ದರ್ಜಂಗ್ ವೀಕ್ಷಣಾಲಯವು ಹೇಳಿದೆ.

‘ಭಾನುವಾರ ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿತ್ತು. ಶನಿವಾರ ಬೆಳಿಗ್ಗೆ 8.30 ರಿಂದ ಭಾನುವಾರ ಮಧ್ಯಾಹ್ನ 2.30ದವರೆಗೆ 39.9 ಮಿ.ಮೀ. ಮಳೆ ಸುರಿದಿರುವುದು ದಾಖಲಾಗಿದೆ ಎಂದು ಸಫ್ದರ್‌ಜಂಗ್ ವೀಕ್ಷಣಾಲಯ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು