ನವದೆಹಲಿ: ದೆಹಲಿಯಲ್ಲಿ ಗುರುವಾರ ಕನಿಷ್ಠ ತಾಪಮಾನವು 3.3 ಡಿಗ್ರಿ ಸೆಲ್ಸಿಯಸ್‌ಗೆ ಕುಸಿದಿದೆ. ಇದರಿಂದಾಗಿ ನಗರದಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ.
ಸತತ ಮೂರನೇ ದಿನವೂ ನಗರದಲ್ಲಿ ಶೀತ ಅಲೆಯ ಪರಿಸ್ಥಿತಿ ಮುಂದುವರಿದಿದೆ ಎಂದು ಐಎಂಡಿಯ ಪ್ರಾದೇಶಿಕ ಕಚೇರಿಯ ಮುಖ್ಯಸ್ಥ ಕುಲ್‌ದೀಪ್ ಶ್ರೀವಾಸ್ತವ್ ಹೇಳಿದರು.
ಲೋಧಿ ರಸ್ತೆಯಲ್ಲಿ ಕನಿಷ್ಠ ತಾಪಮಾನವು 3.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ದೆಹಲಿ–ಎನ್‌ಸಿಆರ್, ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ಹಲವು ಭಾಗಗಳಲ್ಲಿ ದಟ್ಟವಾದ ಮಂಜು ಕವಿದ ವಾತಾವರಣ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶ್ರೀವಾಸ್ತವ್ ತಿಳಿಸಿದರು.
ದೆಹಲಿಯಲ್ಲಿ ಶುಕ್ರವಾರವೂ ಶೀತ ಅಲೆಯ ಪರಿಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆನಂತರದ ದಿನಗಳಲ್ಲಿ ಹಿಮಾಲಯದ ಹವೆಯಲ್ಲಿ ಉಂಟಾಗುವ ಬದಲಾವಣೆಯಿಂದ ತಾಪಮಾನದಲ್ಲಿ ಏರಿಕೆಯಾಗುವ ಸಾಧ್ಯತೆ ಇದೆ. ಜನವರಿ 1ರಿಂದ 6ರ ತನಕ ಕನಿಷ್ಠ ತಾಪಮಾನದಲ್ಲಿ ಏರಿಕೆಯಾಗಬಹುದು. ಅಲ್ಲದೆ ಜನವರಿ 3ರಿಂದ 5ರ ತನಕ ಸ್ವಲ್ಪ ಮಟ್ಟಿಗೆ ಮಳೆಯಾಗುವ ಸಾಧ್ಯತೆಯೂ ಇದೆ ಎಂದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.