ಸೋಮವಾರ, ಅಕ್ಟೋಬರ್ 25, 2021
25 °C

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಂಧ್ರ, ಒಡಿಶಾದತ್ತ ಚಂಡಮಾರುತ– ಎಚ್ಚರಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಭುವನೇಶ್ವರ: ಬಂಗಾಳ ಕೊಲ್ಲಿಯ ಈಶಾನ್ಯ ಮತ್ತು ಪೂರ್ವ ಮಧ್ಯಭಾಗದಲ್ಲಿ ‌ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಒಡಿಶಾ ಮತ್ತು ಆಂಧ್ರಪ್ರದೇಶದ ಕರಾವಳಿಗೆ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಎಚ್ಚರಿಸಿದೆ.

ಗೋಪಾಲಪುರದ ಪೂರ್ವ– ಆಗ್ನೇಯ ದಿಕ್ಕಿನಲ್ಲಿ 510 ಕಿ.ಮೀ ಮತ್ಧು ಆಂಧ್ರಪ್ರದೇಶದ ಕಳಿಂಗಪಟ್ಟಣದಿಂದ 590 ಕಿ.ಮೀ ದೂರದಲ್ಲಿ ಶನಿವಾರ ಮುಂಜಾನೆ ವಾಯುಭಾರ ತೀವ್ರವಾಗಿ ಕುಸಿತಗೊಂಡಿದೆ.

‘ಮುಂದಿನ 12 ಗಂಟೆಗಳಲ್ಲಿ  ಚಂಡಮಾರುತ ತೀವ್ರಗೊಳ್ಳುವ ಸಾಧ್ಯತೆಯಿದೆ. ಈ ಮಾರುತಗಳು ಪಶ್ಚಿಮ ದಿಕ್ಕಿಗೆ ಚಲಿಸಿ, ಆಂಧ್ರಪ್ರದೇಶ ದ ಉತ್ತರ ಭಾಗ ಮತ್ತು ಒಡಿಶಾದ ದಕ್ಷಿಣ ಭಾಗದ ಕರಾವಳಿಯನ್ನು ದಾಟಬಹುದು. ಭಾನುವಾರ (ಸೆ.26) ವಿಶಾಖಪಟ್ಟಣಂ ಮತ್ತು ಗೋಪಾಲಪುರ ನಡುವೆ ಕಳಿಂಗಪಟ್ಟಣಂ ಸುತ್ತ ಚಂಡಮಾರುತ ಉಂಟಾಗುವ ಸಾಧ್ಯತೆ ಇದೆ‌‘ ಎಂದು ಇಲಾಖೆ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು