ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಮರಳಲು 150 ಅಫ್ಗನ್‌ ಸಿಖ್ಖರ ಕಾತರ

Last Updated 20 ಜೂನ್ 2022, 13:00 IST
ಅಕ್ಷರ ಗಾತ್ರ

ನವದೆಹಲಿ: ಕಾಬೂಲ್‌ನ ಗುರುದ್ವಾರದ ಮೇಲೆ ನಡೆದ ಭಯೋತ್ಪಾದಕರ ದಾಳಿ ನಂತರ ಸುಮಾರು 150 ಸಿಖ್ಖರು ಭಾರತಕ್ಕೆ ಮರಳಲು ವೀಸಾಕ್ಕಾಗಿ ಕಾಯುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಗುರುದ್ವಾರದ ಮೇಲೆ ನಡೆದ ದಾಳಿಯ ಬಳಿಕ ಅಫ್ಘಾನಿಸ್ತಾನದಲ್ಲಿ ವಾಸಿಸುತ್ತಿರುವ ನೂರಕ್ಕೂ ಹೆಚ್ಚು ಸಿಖ್ಖರು ಮತ್ತು ಹಿಂದೂಗಳಿಗೆ ಕೇಂದ್ರ ಸರ್ಕಾರ ಆದ್ಯತೆಯ ಇ–ವೀಸಾ ನೀಡಿದೆ.

ಹಿಂದೂ ಮತ್ತು ಸಿಖ್ಖರನ್ನು ಸ್ಥಳಾಂತರಿಸುವ ಪ್ರಯತ್ನ ತೀವ್ರಗೊಳಿಸುವಂತೆಗುರುದ್ವಾರ ಕರ್ತಾ-ಇ-ಪರ್ವಾನ್ ಅಧ್ಯಕ್ಷ ಗುರ್ನಾಮ್ ಸಿಂಗ್ ಅವರು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

’ಭಾರತಕ್ಕೆ ಬರಲು ಸಿದ್ದರಿರುವ 150ಕ್ಕೂ ಹೆಚ್ಚು ಅಫ್ಗನ್‌ ಸಿಖ್ಖರು ವೀಸಾ ಹೊಂದಿದ್ದಾರೆ. ಆದರೆ, ತಾಲಿಬಾನಿಗಳು ಅಫ್ಘಾನಿಸ್ತಾನ ವಶಪಡಿಸಿಕೊಂಡ ನಂತರ ಅವುಗಳನ್ನು ಅಮಾನತುಗೊಳಿಸಲಾಯಿತು. ಸಿಖ್ಖರು ಕಾಬೂಲ್‌ನಲ್ಲಿ ತಮ್ಮ ಅಂಗಡಿಗಳನ್ನು ಮಾರಾಟ ಮಾಡಲು ಸಿದ್ಧರಿದ್ದಾರೆ. ನಿದ್ದೆಯಿಲ್ಲದೆ ರಾತ್ರಿ ಕಳೆಯುತ್ತಿದ್ದಾರೆ‘ ಎಂದು ಗುರ್ನಾಮ್ ಸಿಂಗ್ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT