ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗುಜರಾತ್ – ದಕ್ಷಿಣ ಭಾರತ ಸಂಪರ್ಕಿಸುವ ಹೆದ್ದಾರಿ ಯೋಜನೆಗೆ ಗಡ್ಕರಿ ಶಂಕುಸ್ಥಾಪನೆ

Last Updated 26 ನವೆಂಬರ್ 2021, 5:14 IST
ಅಕ್ಷರ ಗಾತ್ರ

ಲಾತೂರ್: ಉತ್ತಮ ರಸ್ತೆಗಳಿಲ್ಲದೆ ಅಭಿವೃದ್ಧಿ ಹೊಂದುವುದು ಅಸಾಧ್ಯ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರವು ರಸ್ತೆಗಳನ್ನು ಸುಧಾರಿಸುವತ್ತ ಗಮನಹರಿಸುತ್ತಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.

₹40 ಸಾವಿರ ಕೋಟಿ ವೆಚ್ಚದಲ್ಲಿ ಗುಜರಾತ್‌ನ ಸೂರತ್ ಮತ್ತು ದಕ್ಷಿಣ ಭಾರತದೊಂದಿಗೆ ಸಂಪರ್ಕ ಕಲ್ಪಿಸುವ ಹೊಸ ರಾಷ್ಟ್ರೀಯ ಹೆದ್ದಾರಿ ನಿರ್ಮಾಣ ಮಾಡಲಾಗುವುದು. ಇದು ಮಹಾರಾಷ್ಟ್ರದ ನಾಶಿಕ್, ಅಹ್ಮದ್‌ ನಗರ ಮತ್ತು ಸೋಲಾಪುರ ಜಿಲ್ಲೆಗಳ ಮೂಲಕ ಹಾದುಹೋಗಲಿದೆ. ಈ ರಸ್ತೆಯ ಸಂಪರ್ಕವನ್ನು ಲಾತೂರ್ ಜಿಲ್ಲೆಯೂ ಸೇರಿದಂತೆ ಮರಾಠವಾಡ ಪ್ರದೇಶದ ಇತರ ಪ್ರದೇಶಗಳಿಗೂ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.

₹1,023 ಕೋಟಿ ವೆಚ್ಚದ 19 ರಸ್ತೆ ನಿರ್ಮಾಣ ಯೋಜನೆಗಳಿಗೆ ಲಾತೂರ್‌ನ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಉದ್ಯಾನವನದಲ್ಲಿ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದ್ದಾರೆ.

‘ಲಾತೂರ್ ಜಿಲ್ಲೆಯಲ್ಲಿ ಅನೇಕ ಹೆದ್ದಾರಿಗಳು ನಿರ್ಮಾಣ ಹಂತದಲ್ಲಿವೆ. ಈ ಹೊಸ ರಸ್ತೆಗಳು ಯುವಕರ ಭವಿಷ್ಯ ರೂಪಿಸಲಿವೆ. ಅನೇಕ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲಿದೆ ಎಂದು ಅವರು ಹೇಳಿದ್ದಾರೆ.

‘ಕಳೆದ ಕೆಲವು ವರ್ಷಗಳಲ್ಲಿ ಅನೇಕ ರಸ್ತೆಗಳನ್ನು ಸುಧಾರಿಸಲಾಗಿದೆ. ಹೊಸ ರಸ್ತೆಗಳನ್ನು ನಿರ್ಮಿಸಲಾಗಿದೆ. ಲಾತೂರ್‌ನಲ್ಲಿಯೂ ಹೆದ್ದಾರಿಗಳ ವಿಸ್ತರಣೆ ಮಾಡಲಾಗಿದೆ’ ಎಂದು ಗಡ್ಕರಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT