ಸೋಮವಾರ, ಆಗಸ್ಟ್ 8, 2022
24 °C

ಮಹಾರಾಷ್ಟ್ರದಲ್ಲಿ ಹೊಸ ಸರ್ಕಾರ ರಚನೆಗೆ ಸಿದ್ಧತೆ: ಫಡಣವೀಸ್‌ರಿಂದ ಹಕ್ಕು ಮಂಡನೆ?

ಪ್ರಜಾವಾಣಿ ವೆಬ್‌ ಡೆಸ್ಕ್ Updated:

ಅಕ್ಷರ ಗಾತ್ರ : | |

ಮುಂಬೈ: ಬಿಜೆಪಿ ಮುಖಂಡ ದೇವೇಂದ್ರ ಫಡಣವೀಸ್‌ ಮತ್ತು ಶಿವಸೇನಾ ಬಂಡಾಯ ಶಾಸಕರ ನಾಯಕ ಏಕನಾಥ ಶಿಂಧೆ ಅವರು ಹೊಸ ಸರ್ಕಾರದ ರಚನೆಗೆ ಹಕ್ಕು ಮಂಡಿಸುವ ಸಾಧ್ಯತೆ ಇದೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲು ಸಜ್ಜಾಗಿದೆ ಎಂದು ಮೂಲಗಳು ಹೇಳಿವೆ.

ಫಡಣವೀಸ್‌ ಹಾಗೂ ಶಿಂಧೆಯವರು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರನ್ನು ಭೇಟಿ ಮಾಡುವ ಸಾಧ್ಯತೆ ನಿಚ್ಚಳವಾಗಿದೆ. ಈ ಮೂಲಕ ಸರ್ಕಾರ ರಚನೆಗೆ ಔಪಚಾರಿಕ ಪತ್ರ ಮತ್ತು ಶಾಸಕರ ಬೆಂಬಲದ ಪತ್ರವನ್ನು ನೀಡುವ ನಿರೀಕ್ಷೆಯಿದೆ.

ಶಿಂಧೆ ಅವರು ಗೋವಾದಿಂದ ಮುಂಬೈಗೆ ಬಂದಿಳಿದಿದ್ದು, ಶೀಘ್ರದಲ್ಲೇ ಫಡಣವೀಸ್‌ರನ್ನು ಭೇಟಿಯಾಗಲಿದ್ದಾರೆ. ಆ ಬಳಿಕ ರಾಜಭವನಕ್ಕೆ ಭೇಟಿ ನೀಡಲಿದ್ದಾರೆ.

ಈ ಮಧ್ಯೆ, ಮುಂಬೈನಲ್ಲಿ ಎನ್‌ಸಿಪಿ ಮತ್ತು ಕಾಂಗ್ರೆಸ್ ನಾಯಕರು ಪ್ರತ್ಯೇಕ ಸಭೆ ನಡೆಸಿದರು. ಮಾಜಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ಪಕ್ಷದ ಕೆಲವು ಹಿರಿಯ ನಾಯಕರನ್ನು ಭೇಟಿ ಮಾಡಿದರು.

ಇವನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು