ಸೋಮವಾರ, ಸೆಪ್ಟೆಂಬರ್ 28, 2020
21 °C

ಕಂಗನಾ ವಿಚಾರವಾಗಿ ಮಹಾರಾಷ್ಟ್ರ ಸರ್ಕಾರದ ವಿರುದ್ಧ ಗುಡುಗಿದ ದೇವೇಂದ್ರ ಫಡಣವೀಸ್‌

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ಮುಂಬೈ: ಬಾಲಿವುಡ್‌ ನಟಿ ಕಂಗನಾ ರನೋಟ್‌ ವಿಚಾರವಾಗಿ ಮಹಾರಾಷ್ಟ್ರ ವಿರೋಧ ಪಕ್ಷದ ನಾಯಕ ದೇವೇಂದ್ರ ಫಡಣವೀಸ್‌ ಶಿವಸೇನಾ ನೇತೃತ್ವದ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಬಗ್ಗೆ ಮುಂಬೈನಲ್ಲಿ ಸೋಮವಾರ ಮಾತನಾಡಿರುವ ಅವರು, 'ಯಾರಾದರೂ ತಪ್ಪು ಮಾತನಾಡಿದರೆ, ಅವರ ಆಲೋಚನೆ ತಪ್ಪಾಗಿದ್ದರೆ, ಅದನ್ನು ನಾವು ಆಕ್ಷೇಪಿಸಬಹುದು. ಆದರೆ, ಅವರ ಜೀವ ಹಾಗೂ ಆಸ್ತಿಯನ್ನು ರಕ್ಷಿಸುವುದು ರಾಜ್ಯ ಸರ್ಕಾರ ಮತ್ತು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿದವರ ಜವಾಬ್ದಾರಿಯಾಗಿದೆ' ಎಂದು ಹೇಳಿದ್ದಾರೆ. 

'ನೀವು ಬೇರೆಯವರ ಅಭಿಪ್ರಾಯವನ್ನು ಇಷ್ಟಪಡದಿದ್ದರೆ ಅವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಿ. ಆದರೆ, ಅವರನ್ನು ರಕ್ಷಿಸುವುದು ಸಂವಿಧಾನದ ಅಡಿಯಲ್ಲಿ ಪ್ರಮಾಣವಚನ ಸ್ವೀಕರಿಸಿದವರ ಜವಾಬ್ದಾರಿಯಾಗಿದೆ. ಕೇಂದ್ರವು ಆ ಜವಾಬ್ದಾರಿಯನ್ನು ನಿಭಾಯಿಸಿದೆ ಎಂಬುದಾಗಿ ನಾನು ಭಾವಿಸುತ್ತೇನೆ' ಎಂದು ದೇವೇಂದ್ರ ಫಡಣವೀಸ್‌ ತಿಳಿಸಿದ್ದಾರೆ. 

ಇದನ್ನೂ ಓದಿ: ರಾವತ್‌- ರನೋಟ್‌ ನಡುವಿನ ಜಗಳದಲ್ಲಿ ಟ್ರೆಂಡ್‌ ಆದಳು 'ಮುಂಬಾ ದೇವಿ'

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು