ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದಲ್ಲಿ ಸೂಪರ್ ಸಿಎಂ ಇಲ್ಲ: ದೇವೇಂದ್ರ ಫಡಣವೀಸ್

Last Updated 15 ಜುಲೈ 2022, 16:29 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದ ಏಕನಾಥ ಶಿಂಧೆ ನೇತೃತ್ವದ ಸರ್ಕಾರದಲ್ಲಿ ‘ಸೂಪರ್ ಸಿಎಂ’ಗಳಿಲ್ಲ ಎಂದು ಉಪ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್ ಹೇಳಿದ್ದಾರೆ.

ಶಿಂಧೆ ಅವರು ಮುಖ್ಯಮಂತ್ರಿಯಾದರೂ ಫಡಣವೀಸ್ ಅವರೇ ಮುಖ್ಯಮಂತ್ರಿಗಳ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದು ಪ್ರತಿಪಕ್ಷಗಳ ಕೆಲವು ಮಂದಿ ನಾಯಕರು ಟೀಕಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿ ವರದಿಗಾರರ ಜತೆ ಮಾತನಾಡಿದ ಫಡಣವೀಸ್, ‘ಸೂಪರ್ ಸಿಎಂ ಎಂಬ ಪರಿಕಲ್ಪನೆ ಹಾಲಿ ಸರ್ಕಾರದಲ್ಲಿಲ್ಲ. ನಮಗೆ ಒಬ್ಬರೇ ಮುಖ್ಯಮಂತ್ರಿಗಳಿದ್ದಾರೆ. ಅವರೇ ಏಕನಾಥ ಶಿಂಧೆ. ಅವರ ನಾಯಕತ್ವದಡಿಯಲ್ಲಿ ನಾವೆಲ್ಲ ಕೆಲಸ ಮಾಡುತ್ತಿದ್ದೇವೆ’ ಎಂದಿದ್ದಾರೆ.

2014ರಿಂದ 2019ರ ಅವಧಿಯ ಬಿಜೆಪಿ ಸರ್ಕಾರದಲ್ಲಿ ಫಡಣವೀಸ್ ಮುಖ್ಯಮಂತ್ರಿಯಾಗಿದ್ದರು. ಶಿಂಧೆ ಸರ್ಕಾರದಲ್ಲಿ ಭಾಗಿಯಾಗುವುದಿಲ್ಲ ಎಂದು ಆರಂಭದಲ್ಲಿ ಹೇಳಿದ್ದ ಫಡಣವೀಸ್, ಬಳಿಕ ಹೈಕಮಾಂಡ್ ಸೂಚನೆ ಮೇರೆಗೆ ಉಪ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT