ಮಂಗಳವಾರ, ನವೆಂಬರ್ 24, 2020
19 °C

ಅಂತರರಾಷ್ಟ್ರೀಯ ವಿಮಾನ ಸಂಚಾರಕ್ಕೆ ನವೆಂಬರ್ 30ರವರೆಗೆ ನಿರ್ಬಂಧ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೊರೊನಾ ಸೋಂಕು ಹರಡುವಿಕೆಯನ್ನು ನಿಯಂತ್ರಿಸಲು ಅಂತರರಾಷ್ಟ್ರೀಯ ವಿಮಾನ ಸಂಚಾರದ ಮೇಲೆ ವಿಧಿಸಿರುವ ನಿರ್ಬಂಧವನ್ನು ನವೆಂಬರ್‌ 30ರವರೆಗೆ ವಿಸ್ತರಿಸಲಾಗಿದೆ ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (ಡಿಜಿಸಿಎ) ಬುಧವಾರ ತಿಳಿಸಿದೆ.

ಆದರೆ, ಕೆಲವೊಂದು ಪ್ರಕರಣಗಳನ್ನು ಗಮನಿಸಿ, ಈಗಾಗಲೇ ನಿಗದಿಯಾಗಿರುವ ಅಂತರರಾಷ್ಟ್ರೀಯ ವಿಮಾನಗಳನ್ನು ಆಯ್ದ ಮಾರ್ಗಗಳಲ್ಲಿ ಸಂಚರಿಸಲು ಅನುಮತಿ ನೀಡಬಹುದು ಎಂದು ಡಿಜಿಸಿಎ ಸುತ್ತೋಲೆಯಲ್ಲಿ ಉಲ್ಲೇಖಿಸಲಾಗಿದೆ.

ಡಿಜಿಸಿಎ ಹೊರಡಿಸಿರುವ ಹೊಸ ಆದೇಶ ಅಂತರರಾಷ್ಟ್ರೀಯ ಸರಕು ಸಾಗಣೆ ವಿಮಾನಗಳಿಗೆ ಅನ್ವಯವಾಗುವುದಿಲ್ಲ. ಕೊರೊನಾ ಸೋಂಕು ಹರಡುವಿಕೆಯನ್ನು ತಡೆಯುವುದಕ್ಕಾಗಿ ಮಾರ್ಚ್ 23ರಿಂದ ಅಂತರರಾಷ್ಟ್ರೀಯ ವಿಮಾನ ಸಂಚಾರವನ್ನು ನಿಷೇಧಿಸಲಾಗಿದೆ. ಮೇ ತಿಂಗಳಿನಿಂದ ವಂದೇ ಭಾರತ್ ಮಿಷನ್ ಅಡಿಯಲ್ಲಿ ವಿಶೇಷ ಅಂತರರಾಷ್ಟ್ರೀಯ ವಿಮಾನಗಳು ಕಾರ್ಯನಿರ್ವಹಿಸುತ್ತಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು