ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ ಎಂಜಿನ್‌ನಲ್ಲಿ ಬೆಂಕಿ: ತನಿಖೆಗೆ ಆದೇಶ

Last Updated 29 ಅಕ್ಟೋಬರ್ 2022, 4:25 IST
ಅಕ್ಷರ ಗಾತ್ರ

ನವದೆಹಲಿ: ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ ಇಂಡಿಗೊ ವಿಮಾನದ ಎರಡು ಎಂಜಿನ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡ ಪ್ರಕರಣವನ್ನು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯವು (ಡಿಜಿಸಿಎ) ತನಿಖೆಗೆ ಆದೇಶಿಸಿದೆ.

‘ದೆಹಲಿಯಿಂದ ಬೆಂಗಳೂರಿಗೆ ಹೊರಟಿದ್ದ 6ಇ–2131 ಇಂಡಿಗೊ ವಿಮಾನವು ಟೇಕ್‌ ಆಫ್‌ ಆದ ಕೂಡಲೇ ಎರಡು ಎಂಜಿನ್‌ಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಜತೆಗೆ ದೊಡ್ಡ ಶಬ್ದ ಕೇಳಿಸಿದೆ. ಈ ವಿಮಾನ ದೆಹಲಿ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದ್ದು, ಅಲ್ಲೇ ತಪಾಸಣೆ ನಡೆಸಲಾಗುತ್ತಿದೆ’ ಎಂದು ಡಿಜಿಸಿಎಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ರಾತ್ರಿ 9.30ರ ಸುಮಾರಿಗೆ ವಿಮಾನ ಟೇಕ್‌ ಆಫ್‌ ಆಗುವ ವೇಳೆ ಈ ಅವಘಡ ನಡೆದಿದ್ದು, ವಿಮಾನದಲ್ಲಿ 180 ಪ್ರಯಾಣಿಕರಿದ್ದರು. ಎಲ್ಲಾ ಪ್ರಯಾಣಿಕರನ್ನು ಪರ್ಯಾಯ ವಿಮಾನದ ಮೂಲಕ ಗಮ್ಯ ಸ್ಥಾನಕ್ಕೆ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ. ಪ್ರಯಾಣದ ವೇಳೆ ಉಂಟಾದ ಅನನುಕೂಲಕ್ಕೆ ವಿಷಾದಿಸುತ್ತೇವೆ’ ಎಂದು ಇಂಡಿಗೊ ಪ್ರಕಟಣೆಯಲ್ಲಿ ತಿಳಿಸಿದೆ.

ಎಲ್ಲಾ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಪ್ರಯಾಣಿಕರು ಹಂಚಿಕೊಂಡಿರುವ ವಿಡಿಯೊದಲ್ಲಿ ವಿಮಾನ ಟೇಕ್‌ ಆಫ್‌ ಆದ ಕೂಡಲೇ ಎಂಜಿನ್‌ಗೆ ಬೆಂಕಿ ತಗುಲಿದ ದೃಶ್ಯ ಸೆರೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT