ಬುಧವಾರ, ಜೂನ್ 16, 2021
27 °C

ಸುರಕ್ಷತೆ: ವಿಮಾನಯಾನ ಸಂಸ್ಥೆಗಳ ವಿಶೇಷ ಲೆಕ್ಕಪರಿಶೋಧನೆಗೆ ಚಾಲನೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸುರಕ್ಷತೆಗೆ ಸಂಬಂಧಿಸಿ ಕೈಗೊಂಡ ಕ್ರಮಗಳನ್ನು ಪರಿಶೀಲಿಸಲು ಮುಂದಾಗಿರುವ ನಾಗರಿಕ ವಿಮಾನಯಾನ ನಿರ್ದೇಶನಾಲಯವು (ಡಿಜಿಸಿಎ), ಎಲ್ಲಾ ವಿಮಾನಯಾನ ಸಂಸ್ಥೆಗಳ ವಿಶೇಷ ಸುರಕ್ಷತಾ ಲೆಕ್ಕಪರಿಶೋಧನೆ ಪ್ರಾರಂಭಿಸಿದೆ.

ಕಾರ್ಯಾಚರಿಸುವ ವಿಮಾನಗಳ ಗುಣಮಟ್ಟವನ್ನು ಖಾತರಿಪಡಿಸುವ (ಎಫ್‌ಒಕ್ಯೂಎ) ನಿಟ್ಟಿನಲ್ಲಿ ಈ ಲೆಕ್ಕಪರಿಶೋಧನೆಯನ್ನು ನಡೆಸಲಾಗುತ್ತಿದೆ ಎಂದು ಡಿಜಿಸಿಎ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದರು.

ಎಫ್‌ಒಕ್ಯೂಎನಿಂದ ಸಂಗ್ರಹಿಸಲಾಗುವ ಮಾಹಿತಿಯನ್ನು ವಿಮಾನಗಳ ಭವಿಷ್ಯದ ಹಾರಾಟದ ಸುರಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸಲು ಉಪಯೋಗಿಸಲಾಗುತ್ತದೆ.  ಮೊದಲ ಹಂತದಲ್ಲಿ ಸ್ಪೈಸ್‌ಜೆಟ್ ಮತ್ತು ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯ ಲೆಕ್ಕಪರಿಶೋಧನೆ ನಡೆಸಲಾಗುವುದು ಎಂದು ತಿಳಿಸಿದರು.

ಕೋಯಿಕ್ಕೋಡ್‌ನಲ್ಲಿ ವಿಮಾನ ದುರಂತ ಸಂಭವಿಸಿದ ಎರಡು ವಾರಗಳ ನಂತರ ಈ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು