ಶುಕ್ರವಾರ, ಮೇ 20, 2022
25 °C

12ರಿಂದ 18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್: ತುರ್ತು ಬಳಕೆಗೆ ಅನುಮತಿ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: 12ರಿಂದ 18 ವರ್ಷದೊಳಗಿನವರಿಗೆ ನೀಡಲಾಗುವ ಕೋವಿಡ್ ಲಸಿಕೆಗೆ ಭಾರತೀಯ ಔಷಧ ನಿಯಂತ್ರಕರು (ಡಿಸಿಜಿಐ) ಶನಿವಾರ ಅನುಮೋದನೆ ನೀಡಿದ್ದಾರೆ. ಭಾರತ್ ಬಯೋಟೆಕ್ ಅಭಿವೃದ್ಧಿಪಡಿಸಿರುವ ‘ಕೋವ್ಯಾಕ್ಸಿನ್’ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ.

ಮಕ್ಕಳಿಗೆ ಲಸಿಕೆ ನೀಡುವ ಸಂಬಂಧ ಕೇಂದ್ರವು ಮಾರ್ಗಸೂಚಿ ಗಳನ್ನು ಹೊರಡಿಸಲಿದ್ದು, ಅದರ ಪ್ರಕಾರ ಲಸಿಕೆ ನೀಡಲಾಗುತ್ತದೆ. ಮಕ್ಕಳಿಗಾಗಿ ಅಭಿವೃದ್ಧಿಪಡಿಸಿದ ಎರಡನೇ ಲಸಿಕೆ ಇದಾಗಿದ್ದು, ಝೈಡಸ್ ಕ್ಯಾಡಿಲಾ ಸಂಸ್ಥೆ ಅಭಿವೃದ್ಧಿಪಡಿಸಿದ್ದ ‘ಝೈಕೋವ್‌ಡಿ’ ಲಸಿಕೆಯು ಈಗಾಗಲೇ ತುರ್ತು ಬಳಕೆಗೆ ಅನುಮತಿ ಪಡೆದಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು