ಅಹಮದಾಬಾದ್: ಉದ್ಯಮಿಯೊಬ್ಬರಿಂದ ₹5 ಲಕ್ಷ ಲಂಚ ಪಡೆದ ವೇಳೆ ಸಿಬಿಐ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ವಿದೇಶ ವ್ಯಾಪಾರ ಮಹಾ ನಿರ್ದೇಶನಾಲಯದ (ಡಿಜಿಎಫ್‌ಟಿ) ಜಂಟಿ ನಿರ್ದೇಶಕ ಜಾವ್ರಿ ಮಾಲ್ ಬಿಷ್ಣೋಯಿ ಎಂಬುವರು ಅದಾಗಿ ಕೆಲ ಗಂಟೆಗಳಲ್ಲಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆಹಾರದ ಡಬ್ಬಗಳನ್ನು ರಫ್ತು ಮಾಡಲು ಅಗತ್ಯವಿರುವ ನಿರಾಕ್ಷೇಪಣಾ ಪತ್ರ (ಎನ್‌ಒಸಿ) ಒದಗಿಸುವುದಕ್ಕಾಗಿ ಬಿಷ್ಣೋಯಿ ಅವರು ಉದ್ಯಮಿಯೊಬ್ಬರ ಬಳಿ ₹9 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
‘ಸಿಬಿಐ ಅಧಿಕಾರಿಗಳ ತಂಡವು ಪಂಚನಾಮೆ ನಡೆಸುತ್ತಿರುವಾಗ ಬಿಷ್ಣೋಯಿ ಅವರು ನಾಲ್ಕನೇ ಮಹಡಿಯಲ್ಲಿದ್ದ ತಮ್ಮ ಕಚೇರಿಯಿಂದ ಕೆಳಕ್ಕೆ ಜಿಗಿದಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅವರು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದರು. ಈ ಸಂಬಂಧ ಪ್ರದ್ಯುಮನ್ ನಗರ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ’ ಎಂದು ರಾಜ್‌ಕೋಟ್ ನಗರ ಪೊಲೀಸರು ತಿಳಿಸಿದ್ದಾರೆ.
ಬಿಷ್ಣೋಯಿ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಿರುವ ಅವರ ಕುಟುಂಬದ ಸದಸ್ಯರು ಮೃತದೇಹವನ್ನು ತಮ್ಮ ಸುಪರ್ದಿಗೆ ಪಡೆಯಲು ನಿರಾಕರಿಸಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.