ಚೆನ್ನೈ: ಮಹಿಳಾಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಡಿಜಿಪಿ ರ‍್ಯಾಂಕ್‌ನ ಮಾಜಿ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಇತ್ತೀಚೆಗೆ ಈ ಪ್ರಕರಣ ಸಂಬಂಧ ಮದ್ರಾಸ್ ಹೈಕೋರ್ಟ್ ಕೆಲವೊಂದು ಶಿಫಾರಸುಗಳನ್ನು ಮಾಡಿತ್ತು. ಇದರ ಬೆನ್ನಲ್ಲೇ ಈ ವಿಶೇಷ ಡಿಜಿಪಿಯನ್ನು ಅಮಾನತುಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಮಹಿಳಾ ಐಪಿಎಸ್ ಅಧಿಕಾರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಮದ್ರಾಸ್ ಹೈಕೋರ್ಟ್ ಖುದ್ದಾಗಿ ಪ್ರಕರಣವನ್ನು ಕೈಗೆತ್ತಿಕೊಂಡಿದೆ, ಅಲ್ಲದೆ ಸಿಬಿ– ಸಿಐಡಿ ಎಫ್‌ಐಆರ್ ನಡೆಸಿರುವ ತನಿಖೆಯ ಮೇಲ್ವಿಚಾರಣೆಯನ್ನೂ ನಡೆಸಿದೆ. ಮಹಿಳಾ ಅಧಿಕಾರಿ ಮಾಡಿದ ಆರೋಪದ ಆಧಾರದಲ್ಲಿ ಸಿಬಿ– ಸಿಐಡಿ ಎಫ್‌ಐಆರ್ ದಾಖಲಿಸಿಕೊಂಡಿದೆ.
‘ಹಿರಿಯ ಅಧಿಕಾರಿಯ ವಿರುದ್ಧ ಲೈಂಗಿಕ ಕಿರುಕುಳದ ದೂರು ದಾಖಲಿಸದಂತೆ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮನ್ನು ತಡೆದಿದ್ದರು’ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಅವರನ್ನು ಕೂಡ ಅಮಾನತುಗೊಳಿಸಬೇಕು ಎಂದು ಚುನಾವಣಾ ಆಯೋಗ ಹೇಳಿತ್ತು.
ತಮಿಳುನಾಡು ಮುಖ್ಯಮಂತ್ರಿ ಅವರ ಇತ್ತೀಚೆಗಿನ ಪ್ರವಾಸದ ಸಂದರ್ಭದಲ್ಲಿ ಭದ್ರತೆಗಾಗಿ ನಿಯೋಜಿಸಿದ್ದ ವೇಳೆ ತಮಗೆ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಐಪಿಎಸ್ ಮಹಿಳಾ ಅಧಿಕಾರಿ ಹೇಳಿದ್ದರು. ಇದರ ಬೆನ್ನಲ್ಲೇ ತಮಿಳುನಾಡು ಸರ್ಕಾರವು ಲೈಂಗಿಕ ಕಿರುಕುಳದ ಬಗ್ಗೆ ತನಿಖೆ ನಡೆಸಲು ಆಂತರಿಕ ಸಮಿತಿಯನ್ನು ರಚಿಸಿತ್ತು.
‘ ಲೈಂಗಿಕ ಕಿರುಕುಳದ ಆರೋಪ ಎದುರಿಸುತ್ತಿರುವಡಿಜಿಪಿ ರ‍್ಯಾಂಕ್‌ನ ಮಾಜಿ ವಿಶೇಷ ಅಧಿಕಾರಿಯನ್ನು ಅಮಾನತು ಮಾಡಿ’ ಎಂದು ರಾಜ್ಯ ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸಲಹೆ ನೀಡಿತ್ತು. ಈ ಮೂಲಕ ಜನರಿಗೆ ಪ್ರಕರಣದ ಬಗ್ಗೆ ನ್ಯಾಯಯುತವಾಗಿ ತನಿಖೆ ನಡೆಯುತ್ತಿದೆ ಎಂಬುದನ್ನು ತಿಳಿಸಬಹುದು ಎಂದು ಕೋರ್ಟ್ ಹೇಳಿತ್ತು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.