ಭಾನುವಾರ, ಜೂನ್ 26, 2022
29 °C

ಧ್ರುವ್ ಹೆಲಿಕಾಪ್ಟರ್ ಪೂರ್ವ ಲಡಾಕ್‌ನಲ್ಲಿ ತುರ್ತು ಭೂಸ್ಪರ್ಶ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತೀಯ ವಾಯುಪಡೆಯ ಧ್ರುವ್ ಹೆಲಿಕಾಪ್ಟರ್ ಪೂರ್ವ ಲಡಾಖ್‌ನ ಫಾರ್ವರ್ಡ್ ಹೆಲಿಪ್ಯಾಡ್‌ನಲ್ಲಿ ಸೋಮವಾರ ತುರ್ತು ಭೂಸ್ಪರ್ಶ ಮಾಡಿದೆ ಎಂದು ಮೂಲಗಳು ತಿಳಿಸಿವೆ.

ಬೆಳಿಗ್ಗೆ 9:30ರ ಸುಮಾರಿಗೆ ಈ ಘಟನೆ ನಡೆದಿದ್ದು, ಮೂವರು ಸಿಬ್ಬಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಸುಧಾರಿತ ಲಘು ಹೆಲಿಕಾಪ್ಟರ್‌ನಲ್ಲಿದ್ದ ಇಬ್ಬರು ಪೈಲಟ್‌ಗಳು ಮತ್ತು ಇನ್ನೊಬ್ಬ ಸಿಬ್ಬಂದಿ ಸುರಕ್ಷಿತವಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಅವರನ್ನು ಈಗಾಗಲೇ ಸ್ಥಳಾಂತರಿಸಲಾಗಿದೆ. ತುರ್ತು ಭೂಸ್ಪರ್ಶಕ್ಕೆ ಕಾರಣ ತಕ್ಷಣ ತಿಳಿದಿಲ್ಲ ಎಂದು ಅವರು ಹೇಳಿದರು.

ಧ್ರುವ್ ಸ್ಥಳೀಯವಾಗಿ ವಿನ್ಯಾಸಗೊಳಿಸಿದ ಮತ್ತು ಅಭಿವೃದ್ಧಿಪಡಿಸಿದ ಬಹುಪಯೋಗಿ ಹಾಗೂ ಬಹುವಿಧದ ಕಾರ್ಯಾಚರಣೆಯ ಹೆಲಿಕಾಪ್ಟರ್ ಆಗಿದೆ. ಇದು 5.5 ಟನ್ ತೂಕದ ಅವಳಿ-ಎಂಜಿನ್ ಹೆಲಿಕಾಪ್ಟರ್ ಆಗಿದೆ.

 

 

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು