ಶನಿವಾರ, ಮಾರ್ಚ್ 25, 2023
22 °C

ಇಂಧನಗಳ ಮೇಲಿನ ಎಕ್ಸೈಸ್ ಸುಂಕ 2014ರ ಮಟ್ಟಕ್ಕೆ ಇಳಿಸಿ: ದಿಗ್ವಿಜಯ್ ಸಿಂಗ್ ಆಗ್ರಹ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪೆಟ್ರೋಲ್, ಡೀಸೆಲ್ ಸೇರಿದಂತೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಬೇಕು ಎಂದು ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಆಗ್ರಹಿಸಿದ್ದಾರೆ.

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋತ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರ ಮಟ್ಟಕ್ಕೆ ಕಡಿತಗೊಳಿಸಲಿದ್ದಾರೆ ಎಂದು ಅವರು ವ್ಯಂಗ್ಯವಾಡಿದ್ದಾರೆ.

ಇಂಧನ ದರ ಏರಿಕೆಗೆ ಸಂಬಂಧಿಸಿ ಟ್ವೀಟ್ ಮಾಡಿರುವ ಅವರು, ‘ಮೋದಿಯವರಿಗೆ ನಿಜವಾಗಿಯೂ ಜನರಿಗೆ ಅನುಕೂಲ ಮಾಡಿಕೊಡಬೇಕೆಂಬ ಮನಸ್ಸಿದ್ದರೆ ಇಂಧನಗಳ ಮೇಲಿನ ಎಕ್ಸೈಸ್ ಸುಂಕವನ್ನು 2014ರಲ್ಲಿ ಯುಪಿಎ ಸರ್ಕಾರ ಇದ್ದಾಗ ಎಷ್ಟಿತ್ತೋ ಅದೇ ಮಟ್ಟಕ್ಕೆ ಇಳಿಸಲಿ. ಇದರಿಂದ ಪೆಟ್ರೋಲ್ ಹಾಗೂ ಡೀಸೆಲ್ ದರ ಇನ್ನೂ ₹18ರಷ್ಟು ಕಡಿಮೆಯಾಗಲಿದೆ. ಬಹುಶಃ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಸೋಲನುಭವಿಸಿದ ಬಳಿಕ ಅವರು ಆ ನಿರ್ಧಾರ ಕೈಗೊಳ್ಳಬಹುದು’ ಎಂದು ಉಲ್ಲೇಖಿಸಿದ್ದಾರೆ.

ಓದಿ: 

ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕ್ರಮವಾಗಿ ₹5 ಮತ್ತು ₹10ರಷ್ಟು ಕಡಿತಗೊಳಿಸಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಘೋಷಿಸಿತ್ತು. ಆ ಬಳಿಕ ಕರ್ನಾಟಕವೂ ಸೇರಿದಂತೆ ಹಲವು ರಾಜ್ಯಗಳೂ ತೆರಿಗೆ ಕಡಿತ ನಿರ್ಧಾರ ಪ್ರಕಟಿಸಿದ್ದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು