ಭಾನುವಾರ, ಸೆಪ್ಟೆಂಬರ್ 19, 2021
29 °C

ಉಸಿರಾಟದ ತೊಂದರೆ: ಖ್ಯಾತ ಬಾಲಿವುಡ್‌ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಖ್ಯಾತ ಬಾಲಿವುಡ್‌ ನಟ ದಿಲೀಪ್ ಕುಮಾರ್‌ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅವರನ್ನು ಮಂಗಳವಾರ ರಾತ್ರಿ ಖಾರ್‌ ಉಪ ನಗರದ ಹಿಂದೂಜಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಳೆದ ಜೂನ್ 6 ರಂದು ಇದೇ ರೀತಿ ಉಸಿರಾಟದ ತೊಂದರೆಯಿಂದಾಗಿ ದಿಲೀಪ್ ಕುಮಾರ್ ಅವರನ್ನು ಇದೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹತ್ತು ದಿನಗಳ ಹಿಂದೆ ಗುಣಮುಖರಾಗಿ ಅವರು ಮನೆಗೆ ತೆರಳಿದ್ದರು.

ಉಸಿರಾಟ ಸಂಬಂಧಿ ಸಮಸ್ಯೆ ಕಾಣಿಸಿಕೊಂಡಿದ್ದರಿಂದ, ವಯಸ್ಸು ಮತ್ತು ಇತ್ತೀಚೆಗಿನ ಅನಾರೋಗ್ಯದ ಸಮಸ್ಯೆಯನ್ನು ಗಮನಿಸಿದ ಕುಟುಂಬದ ಸದಸ್ಯರು ಮುನ್ನೆಚ್ಚರಿಕೆ ಕ್ರಮವಾಗಿ ದಿಲೀಪ್ ಕುಮಾರ್ ಅವರನ್ನು ಆಸ್ಪತ್ರೆ ದಾಖಲಿಸಿದ್ದಾರೆ. ಅವರು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗ ಚೆನ್ನಾಗಿದ್ದಾರೆ‘ ಎಂದು ಮೂಲಗಳು ತಿಳಿಸಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು