ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರದ ನೂತನ ಗೃಹ ಸಚಿವರಾಗಿ ದಿಲೀಪ್ ವಲ್ಸೆ ಪಾಟೀಲ್ ನೇಮಕ

Last Updated 5 ಏಪ್ರಿಲ್ 2021, 15:41 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಗೃಹ ಸಚಿವ ಅನಿಲ್ ದೇಶ್‌ಮುಖ್ ರಾಜೀನಾಮೆ ನೀಡಿದ ಬಳಿಕ ತೆರವಾದ ಸ್ಥಾನಕ್ಕೆ ಎನ್‌ಸಿಪಿ ಮುಖಂಡ ದಿಲೀಪ್ ವಲ್ಸೆ ಪಾಟೀಲ್ ನೂತನ ಗೃಹ ಸಚಿವರಾಗಿ ನೇಮಕವಾಗಿದ್ದಾರೆ.

64 ವರ್ಷದ ದಿಲೀಪ್ ವಲ್ಸೆ ಪಾಟೀಲ್, ಮೃದು ಸ್ವಭಾವಿ, ಕಳಂಕ ರಹಿತ ನಾಯಕರಾಗಿದ್ದು, ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಉದ್ಧವ್ ಠಾಕ್ರೆ ನೇತೃತ್ವದ ಎಂವಿಎ ಸರ್ಕಾರದಲ್ಲಿ ವಲ್ಸೆ ಪಾಟೀಲ್, ಪ್ರಸ್ತುತ ಅಬಕಾರಿ ಮತ್ತು ಕಾರ್ಮಿಕ ಎಂಬ ಎರಡು ಪ್ರಮುಖ ಖಾತೆಗಳನ್ನು ನಿರ್ವಹಿಸುತ್ತಿದ್ದರು.

ಎನ್‌ಸಿಪಿಯ ಹಸನ್ ಮುಶ್ರೀಫ್ ಅವರಿಗೆ ಕಾರ್ಮಿಕ ಖಾತೆ ಮತ್ತು ಉಪ ಮುಖ್ಯಮಂತ್ರಿ ಅಜಿತ್ ಪವಾರ್‌ಗೆ ಹಣಕಾಸು ಹಾಗೂ ಯೋಜನೆಗಳ ಜೊತೆಗೆ ಅಬಕಾರಿ ಖಾತೆಯನ್ನು ವಹಿಸಲಾಗಿದೆ.

ಸೋಮವಾರ ನಡೆದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ, ಭ್ರಷ್ಟಾಚಾರದ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶದ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಸ್ಥಾನಕ್ಕೆ ಅನಿಲ್ ದೇಶ್‌ಮುಖ್ ರಾಜೀನಾಮೆ ಸಲ್ಲಿಸಿದ್ದರು.

ಅನಿಲ್ ದೇಶ್‌ಮುಖ್ ವಿರುದ್ಧ ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ ಬೀರ್ ಸಿಂಗ್ ಮಾಡಿರುವ ಭ್ರಷ್ಟಾಚಾರ ಮತ್ತು ದುರ್ನಡತೆಯ ಆರೋಪಕ್ಕೆ ಸಂಬಂಧಿಸಿದಂತೆ 15 ದಿನಗಳಲ್ಲಿ ಪ್ರಾಥಮಿಕ ತನಿಖೆ ಪೂರ್ಣಗೊಳಿಸುವಂತೆ ಬಾಂಬೆ ಹೈಕೋರ್ಟ್ ಸೋಮವಾರ ಕೇಂದ್ರಿಯ ತನಿಖಾ ದಳಕ್ಕೆ (ಸಿಬಿಐ) ನಿರ್ದೇಶನ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT