ಶ್ರೀನಗರ: ಸಮರ್ಪಕ ಕಾರಣಗಳಿಲ್ಲದೆ 11 ಸರ್ಕಾರಿ ನೌಕರರನ್ನು ವಜಾಗೊಳಿಸಿರುವುದು ಜಮ್ಮು ಮತ್ತು ಕಾಶ್ಮೀರ ಆಡಳಿತ ಮಾಡಿರುವ ಅಪರಾಧವಾಗಿದೆ ಎಂದು ಪಿಡಿಪಿ ಮುಖ್ಯಸ್ಥೆ ಮೆಹಬೂಬಾ ಮುಫ್ತಿ ಭಾನುವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಅವರ ಇಬ್ಬರು ಪುತ್ರರು ಸೇರಿದಂತೆ 11 ನೌಕರರನ್ನುವಿವಿಧ ಭಯೋತ್ಪಾದಕ ಗುಂಪುಗಳ ಜತೆ ಸಂಪರ್ಕ ಹೊಂದಿದ್ದಾರೆ ಎಂಬ ಆರೋಪದ ಮೇರೆಗೆ ವಜಾ ಮಾಡಲಾಗಿದೆ ಎಂದು ಶನಿವಾರ ಹಿರಿಯ ಅಧಿಕಾರಿಗಳು ತಿಳಿಸಿದ್ದರು.
‘ಹುಸಿ ರಾಷ್ಟ್ರೀಯತೆ’ಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಜಮ್ಮು ಮತ್ತು ಕಾಶ್ಮೀರದ ಜನರನ್ನು ಶೋಷಿಸುತ್ತಿದೆ. ದುರ್ಬಲವಾದ ಆಧಾರಗಳ ಮೇರೆಗೆ 11 ಸರ್ಕಾರಿ ನೌಕರರನ್ನು ದಿಢೀರನೆ ವಜಾಗೊಳಿಸಿರುವುದು ಅಪರಾಧ. ಕಾಶ್ಮೀರಿಗಳನ್ನು ಶಿಕ್ಷಿಸುವ ಏಕೈಕ ಉದ್ದೇಶದಿಂದ ಈ ರೀತಿಯ ನೀತಿ ನಿರ್ಧಾರಗಳನ್ನು ಸರ್ಕಾರ ತೆಗೆದುಕೊಳ್ಳುತ್ತಿದೆ’ ಎಂದು ಮೆಹಬೂಬಾ ಟ್ವೀಟ್‌ನಲ್ಲಿ ದೂರಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.