ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಣಿಪುರದ 12 ಶಾಸಕರ ಅನರ್ಹತೆ ಪ್ರಕರಣ; ಶೀಘ್ರವೇ ನಿರ್ಧಾರ –‘ಸುಪ್ರೀಂ’ಗೆ ಭರವಸೆ

Last Updated 13 ನವೆಂಬರ್ 2021, 10:14 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಚುನಾವಣಾ ಆಯೋಗದ ಅಭಿಪ್ರಾಯವನ್ನು ಆಧರಿಸಿ ‘ಲಾಭದಾಯಕ ಹುದ್ದೆ’ಗೆ ಸಂಬಂಧಿಸಿದಂತೆ 12 ಶಾಸಕರ ಅನರ್ಹತೆ ಕುರಿತ ಪ್ರಕರಣದಲ್ಲಿ ಮಣಿಪುರದ ರಾಜ್ಯಪಾಲರು ಶೀಘ್ರವೇ ನಿರ್ಧಾರ ತೆಗೆದುಕೊಳ್ಳುವರು ಎಂದು ಸುಪ್ರೀಂ ಕೋರ್ಟ್‌ಗೆ ಭರವಸೆ ನೀಡಲಾಗಿದೆ.

ನ್ಯಾಯಮೂರ್ತಿ ಎಲ್.ನಾಗೇಶ್ವರರಾವ್ ನೇತೃತ್ವದ ಪೀಠವು, ‘ರಾಜ್ಯಪಾಲರು ಏನು ತೀರ್ಮಾನ ಕೈಗೊಂಡಿದ್ದಾರೆ’ ಎಂದು ಪ್ರಶ್ನಿಸಿದಾಗ, ಸಾಲಿಸಿಟರ್ ಜನರಲ್‌ ತುಷಾರ್ ಮೆಹ್ತಾ ಅವರು ಈ ಭರವಸೆ ನೀಡಿದರು.

‘ಚುನಾವಣಾ ಆಯೋಗ ಜನವರಿ ತಿಂಗಳಲ್ಲಿ ಭರವಸೆ ನೀಡಿದೆ. ವಿಧಿ 192ರ ಅನ್ವಯ ರಾಜ್ಯಪಾಲರು ತೀರ್ಮಾನ ತೆಗೆದುಕೊಳ್ಳಬೇಕಿದೆ. 11 ತಿಂಗಳಿನಿಂದ ಏನೂ ಆಗಿಲ್ಲ. ಈ ಬಗ್ಗೆ ಆದೇಶ ಹೊರಡಿಸಲು ನಾವು ಬಯಸುವುದಿಲ್ಲ. ತೀರ್ಮಾನ ತೆಗೆದುಕೊಳ್ಳುವಂತೆ ತಿಳಿಸಿ’ ಎಂದು ಪೀಠವು ಹೇಳಿತು.

ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಮತ್ತು ಬಿ.ವಿ.ನಾಗರತ್ನ ಅವರು ಪೀಠದ ಇತರ ಸದಸ್ಯರು. ‘ಈ ಕುರಿತು ಏನಾದರೂ ತೀರ್ಮಾನ ತೆಗೆದುಕೊಳ್ಳಲಾಗುವುದು. ಯಾವುದೇ ಸ್ಪಷ್ಟ ನಿರ್ದೇಶನ ಬೇಡ’ ಎಂದು ಮೆಹ್ತಾ ಅವರು ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT