ನವದೆಹಲಿ: ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರಿಗೆ ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ ಎಂದು ಸೋಮವಾರ ಅಧಿಕೃತ ಮೂಲಗಳು ತಿಳಿಸಿವೆ.
ಅವರಿಗೆ(ರಾಹುಲ್ ಗಾಂಧಿ) ನೀಡಲಾಗಿರುವ ದೆಹಲಿಯ ಲುಟೆನ್ಸ್ ಪ್ರದೇಶದಲ್ಲಿರುವ ನಂ 12, ತುಘಲಕ್ ಲೇನ್ ಬಂಗಲೆಯನ್ನು ತೊರೆಯುವಂತೆ ಲೋಕಸಭಾ ವಸತಿ ಸಮಿತಿಯು ನೋಟಿಸ್ ನೀಡಿದೆ.
2019ರಲ್ಲಿ ಮೋದಿ ಉಪನಾಮವನ್ನು ವ್ಯಂಗ್ಯ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದ ಮಾನನಷ್ಟ ಮೊಕದ್ದಮೆಯಲ್ಲಿ ರಾಹುಲ್ ಗಾಂಧಿ ದೋಷಿ ಎಂದು ಮಾರ್ಚ್ 23ರಂದು ಗುಜರಾತ್‌ನ ಸೂರತ್ ನ್ಯಾಯಾಲಯ ತೀರ್ಪು ನೀಡಿತ್ತು. ಅಲ್ಲದೆ, 2 ವರ್ಷ ಜೈಲು ಶಿಕ್ಷೆ ಮತ್ತು ದಂಡವನ್ನೂ ವಿಧಿಸಿತ್ತು.
ಇದರ ಬೆನ್ನಲ್ಲೇ ಲೋಕಸಭಾ ಸದಸ್ಯತ್ವದಿಂದ ರಾಹುಲ್ ಅವರನ್ನು ಅನರ್ಹಗೊಳಿಸಿ ಲೋಕಸಭಾ ಕಾರ್ಯಾಲಯ ಆದೇಶ ಮಾಡಿತ್ತು.
ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಂಡ ನಂತರ ತಿಂಗಳೊಳಗೆ ಅಧಿಕೃತ ಬಂಗಲೆ ಖಾಲಿ ಮಾಡಬೇಕು ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.
ಆದರೆ, ಸಮಯಾವಕಾಶ ಕೋರಿ ರಾಹುಲ್, ವಸತಿ ಸಮಿತಿಗೆ ಅರ್ಜಿ ಸಲ್ಲಿಸಬಹುದು ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.