ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಂಗವಿಕಲರ ವಾಹನಗಳಿಗೆ ಟೋಲ್‌ ಶುಲ್ಕ ಇಲ್ಲ’

Last Updated 4 ಫೆಬ್ರುವರಿ 2021, 18:05 IST
ಅಕ್ಷರ ಗಾತ್ರ

ನವದೆಹಲಿ: ಅಂಗವಿಕಲರ ಮಾಲೀಕತ್ವದ ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಗುರುವಾರ ಹೇಳಿದರು.

ಹೆದ್ದಾರಿ ಟೋಲ್‌ಗಳ ಶುಲ್ಕ ಪಾವತಿಯಲ್ಲಿ ವಿನಾಯಿತಿ ನೀಡಿರುವ ಸಂಬಂಧ ಸರ್ಕಾರ ಈಗಾಗಲೇ ಅಧಿಸೂಚನೆ ಹೊರಡಿಸಿದೆ ಎಂದು ಗಡ್ಕರಿ ಅವರು ಲೋಕಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ತಿಳಿಸಿದರು.

ಅಂಗವಿಕಲ ವ್ಯಕ್ತಿಗಳ ಬಳಕೆಗಾಗಿ ವಿಶೇಷವಾಗಿ ವಿನ್ಯಾಸಗೊಳಿಸಲಾದ ವಾಹನಗಳಿಗೆ ಮಾತ್ರ ದೇಶದಲ್ಲಿ ಈವರೆಗೆ ಟೋಲ್ ತೆರಿಗೆ ಪಾವತಿಸುವುದರಿಂದ ವಿನಾಯಿತಿ ನೀಡಲಾಗಿತ್ತು. ಇಂತಹ ವಾಹನಗಳನ್ನು ಕೇಂದ್ರ ಮೋಟಾರು ವಾಹನ ಕಾಯ್ದೆಯಲ್ಲಿ ‘ಅಮಾನ್ಯ ವಾಹನಗಳು’ ಎಂದು ಗುರುತಿಸಲಾಗಿದೆ.

ಅಂಗವಿಕಲರ ಮಾಲೀಕತ್ವದ ವಾಹನಕ್ಕೆ ರಸ್ತೆ ತೆರಿಗೆ ವಿನಾಯಿತಿ ನೀಡಲಾಗಿದೆ. ಆದಾಗ್ಯೂ ಇದು ರಾಜ್ಯ ವ್ಯಾಪ್ತಿಗೆ ಒಳಪಟ್ಟಿದ್ದು. ರಾಜ್ಯಗಳೇ ಈ ಬಗ್ಗೆ ನಿರ್ಧಾರವನ್ನು ತೆಗೆದುಕೊಳ್ಳಬೇಕು ಎಂದು ಸಚಿವರು ಹೇಳಿದ್ದಾರೆ.

ಅಂಗವಿಕಲರ ವಾಹನಗಳಿಗೆ ರಸ್ತೆ ತೆರಿಗೆ ವಿನಾಯಿತಿ ನೀಡಲು ಈಗಾಗಲೇ 11 ರಾಜ್ಯಗಳು ಒಪ್ಪಿಕೊಂಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT