ನವದೆಹಲಿ: ಕರ್ನಾಟಕದಲ್ಲಿ ನಿರ್ಮಾಣವಾಗುತ್ತಿರುವ ಮೇಕೆದಾಟು ಅಣೆಕಟ್ಟು ಸ್ಥಗಿತಕ್ಕೆ ಡಿಎಂಕೆ ಪಕ್ಷ ಸದನದಲ್ಲಿ ಹೋರಾಟ ಮಾಡಲಿದೆ ಎಂದು ಡಿಎಂಕೆ ಸಂಸದ ತಿರುಚಿ ಶಿವ ತಿಳಿಸಿದ್ದಾರೆ.
ಸಂಸತ್ತಿನ ಹೊರಗೆ ಮಾಧ್ಯಮದವರ ಜೊತೆ ಮಾತನಾಡಿದ ಅವರು, ತಮಿಳುನಾಡು ಮುಖ್ಯಮಂತ್ರಿ ಸ್ಟಾಲಿನ್ ಅವರು ಇತ್ತೀಚೆಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಮೇಕೆದಾಟು ಅಣೆಕಟ್ಟೆ ನಿರ್ಮಾಣ ವಿಚಾರದಲ್ಲಿ ಮುಂದುವರೆಯದಂತೆ ನೀವು ಕರ್ನಾಟಕ ಸರ್ಕಾರಕ್ಕೆ ಸೂಚಿಸಬೇಕು ಎಂದು ಮನವಿ ಮಾಡಿದ್ದರು.
ಆದರೆ ಪ್ರಧಾನಿಯವರು ಪೂರಕವಾಗಿ ಸ್ಪಂದಿಸಿಲ್ಲವಾದ್ದರಿಂದ ಡಿಎಂಕೆ ಪಕ್ಷ ಸದನದಲ್ಲಿ ವಿಷಯ ಪ್ರಸ್ತಾಪಿಸಿ ಹೋರಾಟ ಮಾಡಲಿದೆ ಎಂದು ಅವರು ತಿಳಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.