ಶನಿವಾರ, ಏಪ್ರಿಲ್ 17, 2021
30 °C

ತಮಿಳುನಾಡು: ಡಿಎಂಕೆ ಮುಖ್ಯಸ್ಥ ಎಂ.ಕೆ. ಸ್ಟಾಲಿನ್ ಕೊಳತ್ತೂರಿನಿಂದ ಸ್ಪರ್ಧೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

DMK chief M K Stalin Credit: PTI Photo

ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಡಿಎಂಕೆ ನಾಯಕ ಎಂ.ಕೆ.ಸ್ಟಾಲಿನ್ ಚೆನ್ನೈನ ಕೊಳತ್ತೂರ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ.

ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದ್ದು, ಎಐಎಡಿಎಂಕೆ ಮಾಜಿ ನಾಯಕ ತಂಗ ತಮಿಳ್‌ಸೆಲ್ವನ್‌ ಅವರನ್ನು ಉಪ ಮುಖ್ಯಮಂತ್ರಿ ಒ ಪನ್ನೀರ್‌ಸೆಲ್ವಂ ವಿರುದ್ಧ ಕಣಕ್ಕಿಳಿಸಲಾಗಿದೆ. ಉದಯನಿಧಿ ಸ್ಟಾಲಿನ್ ಅವರು ಚೆಪಾಕ್–ತಿರುವಳ್ಳಿಕೇನಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಓದಿ: 

ಎಡಪ್ಪಾಡಿ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಪಳನಿಸ್ವಾಮಿ ವಿರುದ್ಧ ಟಿ.ಸಂಪತ್‌ ಕುಮಾರ್ ಅವರನ್ನು ಡಿಎಂಕೆ ಕಣಕ್ಕಿಳಿಸಿದೆ.

ಡಿಎಂಕೆ ಪ್ರಧಾನ ಕಾರ್ಯದರ್ಶಿ ದೊರೈ ಮುರುಗನ್ ಅವರನ್ನು ವೆಲ್ಲೂರ್‌ ಜಿಲ್ಲೆಯ ಕಟ್ಪಾಡಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು