ಶುಕ್ರವಾರ, ಡಿಸೆಂಬರ್ 3, 2021
20 °C

ಪಾಕ್ ಗೆದ್ದರೆ ಪಟಾಕಿ ಸಿಡಿಸುವವರ ಡಿಎನ್‌ಎ ಭಾರತೀಯರದ್ದು ಅಲ್ಲ: ಅನಿಲ್ ವಿಜ್

ಪಿಟಿಐ Updated:

ಅಕ್ಷರ ಗಾತ್ರ : | |

ಚಂಡೀಗಢ: 'ಭಾರತದ ವಿರುದ್ಧದ ಟಿ–20 ವಿಶ್ವಕಪ್‌ ಕ್ರಿಕೆಟ್ ಪಂದ್ಯದಲ್ಲಿ ಪಾಕಿಸ್ತಾನ ಗೆದ್ದರೆ ದೇಶದಲ್ಲಿ ಪಟಾಕಿ ಸಿಡಿಸುವವರ ಡಿಎನ್‌ಎ ಭಾರತೀಯರದ್ದಾಗಿರಲು ಸಾಧ್ಯವಿಲ್ಲ' ಎಂದು ಹರಿಯಾಣ ಆರೋಗ್ಯ ಸಚಿವ ಅನಿಲ್ ವಿಜ್ ಮಂಗಳವಾರ ಹೇಳಿದ್ದಾರೆ.

'ಪಾಕಿಸ್ತಾನ ಕ್ರಿಕೆಟ್ ಪಂದ್ಯವನ್ನು ಗೆದ್ದ ಮೇಲೆ ಭಾರತದಲ್ಲಿ ಪಟಾಕಿ ಸಿಡಿಸಿ ಸಂಭ್ರಮಿಸುವವರ ಡಿಎನ್‌ಎ ಭಾರತೀಯದ್ದಾಗಿರಲು ಸಾಧ್ಯವಿಲ್ಲ. ನಮ್ಮ ಮನೆಯಲ್ಲೇ ಅಡಗಿರುವ 'ದೇಶದ್ರೋಹಿ'ಗಳ ಬಗ್ಗೆ ಎಚ್ಚರದಿಂದಿರಿ ಎಂದು ವಿಜ್ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಭಾನುವಾರ (ಅ.24) ದುಬೈನಲ್ಲಿ ನಡೆದ ಐಸಿಸಿ ಟಿ-20 ವಿಶ್ವಕಪ್ ಪಂದ್ಯದಲ್ಲಿ ಪಾಕಿಸ್ತಾನ ತಂಡ ಭಾರತದ ವಿರುದ್ಧ 10 ವಿಕೆಟ್‌ಗಳ ಜಯ ದಾಖಲಿಸಿತ್ತು. ಹೀಗಾಗಿ ಪಾಕ್ ಗೆಲುವಿಗೆ ಕೆಲವು ಕಾಶ್ಮೀರಿ ವಿದ್ಯಾರ್ಥಿಗಳು ಸಂಭ್ರಮಾಚರಿಸಿದ್ದಾರೆ ಮತ್ತು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ ಬಿಜೆಪಿ ನಾಯಕ ಈ ಹೇಳಿಕೆ ನೀಡಿದ್ದಾರೆ.

ಈ ಮಧ್ಯೆ, ಐಸಿಸಿ ಟಿ-20 ವಿಶ್ವಕಪ್ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ವಿಜಯ ಸಾಧಿಸಿದ್ದಕ್ಕಾಗಿ ಸಂಭ್ರಮಾಚರಿಸಿದ ವೈದ್ಯಕೀಯ ಕಾಲೇಜು ವಿದ್ಯಾರ್ಥಿಗಳ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶ್ರೀನಗರದಲ್ಲಿ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಎರಡು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಪಂದ್ಯದ ನಂತರ ವ್ಯಕ್ತಿಗಳ ಗುಂಪೊಂದು ಆಕ್ಷೇಪಾರ್ಹ ಘೋಷಣೆಗಳನ್ನು ಕೂಗುತ್ತಿರುವುದನ್ನು ತೋರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಸಂಭಾ ಜಿಲ್ಲೆಯಲ್ಲಿ ಆರು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು