ಬುಧವಾರ, ಏಪ್ರಿಲ್ 14, 2021
24 °C

ಆಯೋಗವನ್ನು ಅಲಕ್ಷಿಸಬೇಡಿ; ಮಮತಾಗೆ ಚುನಾವಣಾ ಆಯೋಗ ತೀಕ್ಷ್ಣ ಪ್ರತಿಕ್ರಿಯೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೋಲ್ಕತ್ತ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ತೀಕ್ಷ್ಣ ಸಂದೇಶ ರವಾನಿಸಿರುವ ಚುನಾವಣಾ ಆಯೋಗವು, ನಿರಂತರ ಕೊಂಕುನುಡಿಯಿಂದ ಸಂಸ್ಥೆಯನ್ನು ಅಲಕ್ಷಿಸಬೇಡಿ ಎಂದು ಹೇಳಿದೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ಅಭಿಯಾನದಲ್ಲಿ ನಿರಂತರ ವಾಗ್ದಾಳಿ ನಡೆಸುತ್ತಲೇ ಬಂದಿರುವ ಮಮತಾ ಬ್ಯಾನರ್ಜಿ, ಚುನಾವಣಾ ಆಯೋಗವು ಕೇಂದ್ರ ಸರ್ಕಾರದ ಕೈಗೊಂಬೆಯಾಗಿ ವರ್ತಿಸುತ್ತಿದೆ ಎಂದು ಆರೋಪಿಸಿದ್ದರು.

ಇತ್ತೀಚೆಗಿನ ದಿನಗಳಲ್ಲಿ ಕೋಲ್ಕತ್ತ ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಟಿಎಂಸಿ ಪ್ರತಿನಿಧಿಗಳನ್ನು ಭೇಟಿಯಾದರೂ ಆಯೋಗವು ರಾಜಕೀಯ ಪಕ್ಷಗಳನ್ನು ಭೇಟಿ ಮಾಡಬೇಕೆಂದು ಮಮತಾ ಆಗ್ರಹಿಸಿದ್ದರೆ ಅದು ಚುನಾವಣೆ ಆಯೋಗವನ್ನು ಕಡೆಗಣಿಸುವ ಪ್ರಯತ್ನವಾಗಿದೆ ಎಂದು ಮಾರ್ಚ್ 14ರಂದು ಚುನಾವಣಾ ಆಯುಕ್ತ ಸುನಿಲ್ ಅರೋರಾಗೆ ಮಮತಾ ಬ್ಯಾನರ್ಜಿ ಬರೆದ ಪತ್ರಕ್ಕೆ ಉತ್ತರವಾಗಿ ತಿಳಿಸಿದೆ.

ಪಶ್ಚಿಮ ಬಂಗಾಳ ಚುನಾವಣಾ ಆಯೋಗದ ಉಪ ಆಯುಕ್ತ ಸುದೀಪ್ ಜೈನ್ ನೀಡಿರುವ ಉತ್ತರದಲ್ಲಿ ಮಮತಾ ಬ್ಯಾನರ್ಜಿ ಆರೋಪಗಳು ದುರದೃಷ್ಟಕರ ಎಂದು ಉಲ್ಲೇಖಿಸಲಾಗಿದೆ.

ಇದನ್ನೂ ಓದಿ: 

ಇತ್ತೀಚೆಗೆ, ಚುನಾವಣಾ ಆಯೋಗದ ಉಪ ಆಯುಕ್ತ ಸುದೀಪ್ ಜೈನ್ ತಟಸ್ಥ ನಿಲುವನ್ನು ಪ್ರಶ್ನಿಸಿದ್ದ ಟಿಎಂಸಿ, ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣಾ ಸೇವೆಯಿಂದ ವರ್ಗಾಯಿಸಬೇಕು ಎಂದು ಒತ್ತಾಯಿಸಿತ್ತು. ಆದರೆ ಚುನಾವಣಾ ಆಯೋಗವು ಸುದೀಪ್ ಜೈನ್ ಬೆಂಬಲಕ್ಕೆ ನಿಂತಿತ್ತು.

ಈ ಎಲ್ಲ ಘಟನೆಗಳಿಂದಾಗಿ ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಚುನಾವಣಾ ಆಯೋಗದ ನಡುವೆ ಆರೋಪ ಪ್ರತ್ಯಾರೋಪಗಳು ಮುಂದುವರಿದಿದೆ.

ಚುನಾವಣಾ ಆಯೋಗವನ್ನು ಯಾರು ನಡೆಸುತ್ತಿದ್ದಾರೆ ಎಂದು ಗೌರವದಿಂದಲೇ ಪ್ರಶ್ನಿಸುತ್ತಿದ್ದೇನೆ? ಅಮಿತ್ ಶಾ ನೀವು ಅದನ್ನು ನಡೆಸುತ್ತಿದ್ದೀರಾ? ನಾವು ಮುಕ್ತ ಮತ್ತು ನ್ಯಾಯಯುತ ಚುನಾವಣೆಯನ್ನು ಬಯಸುತ್ತೇವೆ. ಆದರೆ ಅಮಿತ್ ಶಾ ಯಾರು? ಚುನಾವಣಾ ಆಯೋಗಕ್ಕೆ ಮಾರ್ಗದರ್ಶನ ನೀಡಲು ಅವರು ಯಾರು? ಚುನಾವಣಾ ಆಯೋಗದ ಕೆಲಸದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ನನ್ನ ಭದ್ರತಾ ಅಧಿಕಾರಿಯನ್ನು ತೆಗೆದು ಹಾಕಲಾಗಿದೆ. ಅವರಿಗೆ ಏನು ಬೇಕು? ನನ್ನನ್ನು ಕೊಲ್ಲಲು ಬಯಸುವಿರಾ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದರು.

ಬಿಜೆಪಿ ಹಸ್ತಕ್ಷೇಪ ಮುಂದುವರಿದರೆ ಚುನಾವಣಾ ಆಯೋಗದ ಕಚೇರಿಯ ಮುಂದೆ ಪ್ರತಿಭಟನೆ ನಡೆಸುವುದಾಗಿ ಮಮತಾ ಎಚ್ಚರಿಕೆ ನೀಡಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು