ಮಂಗಳವಾರ, ಅಕ್ಟೋಬರ್ 26, 2021
21 °C

ಚೀನಾದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಕಾರು ಭಾರತದಲ್ಲಿ ಮಾರಬೇಡಿ: ಟೆಸ್ಲಾಗೆ ಗಡ್ಕರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಚೀನಾದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಬೇಡಿ ಎಂದು ಅಮೆರಿಕದ ಟೆಸ್ಲಾ ಕಂಪನಿಗೆ ಸೂಚಿಸಿದ್ದೇನೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

‘ಇಂಡಿಯಾ ಟುಡೆ ಕಾನ್‌ಕ್ಲೇವ್ 2021’ನಲ್ಲಿ ಮಾತನಾಡಿದ ಅವರು, ಚೀನಾದಲ್ಲಿ ತಯಾರಿಸಿದ ಎಲೆಕ್ಟ್ರಿಕ್ ಕಾರುಗಳನ್ನು ಭಾರತದಲ್ಲಿ ಮಾರಾಟ ಮಾಡಬೇಡಿ. ಭಾರತದಲ್ಲೇ ಎಲೆಕ್ಟ್ರಿಕ್ ಕಾರುಗಳನ್ನು ತಯಾರಿಸಿ ಮತ್ತು ರಫ್ತು ಮಾಡಿ. ಅದಕ್ಕೆ ಏನೆಲ್ಲ ನೆರವು ಬೇಕೋ ಅದೆಲ್ಲವನ್ನೂ ಸರ್ಕಾರ ಒದಗಿಸಿಕೊಡಲಿದೆ ಎಂದು ಟೆಸ್ಲಾಗೆ ಸೂಚಿಸಿರುವುದಾಗಿ ತಿಳಿಸಿದ್ದಾರೆ.

2030ರ ವೇಳೆಗೆ ಎಲೆಕ್ಟ್ರಿಕ್ ಕಾರು ಮಾರಾಟ ಶೇ 30ಕ್ಕೆ, ಎಲೆಕ್ಟ್ರಿಕ್ ವಾಣಿಜ್ಯ ವಾಹನಗಳ ಮಾರಾಟ ಶೇ 70ಕ್ಕೆ ಮತ್ತು ದ್ವಿಚಕ್ರ, ತ್ರಿಚಕ್ರ ಎಲೆಕ್ಟ್ರಿಕ್ ವಾಹನಗಳ ಮಾರಾಟವನ್ನು ಶೇ 80ಕ್ಕೆ ಹೆಚ್ಚಿಸಬೇಕೆಂಬ ಗುರಿ ಸರ್ಕಾರದ ಮುಂದಿದೆ ಎಂದೂ ಗಡ್ಕರಿ ಹೇಳಿದ್ದಾರೆ.

ಓದಿ: 

2030ರ ವೇಳೆಗೆ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಮತ್ತು ಕಾರುಗಳ ಬಳಕೆ ಶೇ 40ಕ್ಕೆ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಬಳಕೆ ಶೇ 10ಕ್ಕೆ ಹೆಚ್ಚಳವಾದರೆ ₹3.5 ಲಕ್ಷ ಕೋಟಿ ಮೌಲ್ಯದ 15.6 ಕೋಟಿ ಟನ್ ಕಚ್ಚಾ ತೈಲ ಬಳಕೆ ಕಡಿಮೆ ಮಾಡುವುದು ಸಾಧ್ಯವಾಗಲಿದೆ ಎಂದು ಗಡ್ಕರಿ ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು