ಮಂಗಳವಾರ, ನವೆಂಬರ್ 24, 2020
21 °C

ನಿಮ್ಮ ಆಯ್ಕೆಯ ಸರ್ಕಾರ ರಚನೆಗಾಗಿ ಮತದಾನ ಮಾಡಿ: ರಾಹುಲ್ ಗಾಂಧಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ತಪ್ಪದೇ ಮತದಾನ ಮಾಡಿ. ಇದರಿಂದ ರಾಜ್ಯದಲ್ಲಿ ನಿಮ್ಮ ಆಯ್ಕೆಯ ಸರ್ಕಾರ ರಚನೆಯಾಗಲಿದೆ’ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮಂಗಳವಾರ ಬಿಹಾರದ ಮತದಾರರಿಗೆ ಮನವಿ ಮಾಡಿದ್ದಾರೆ. ಎರಡನೇ ಹಂತದ ಮತದಾನಕ್ಕೆ ಮುನ್ನಾ ಈ ಕುರಿತು ಅವರು ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

‘ಮಂಗಳವಾರ ನಾನು ರಾಜ್ಯದ ಕೊರ‍್ಹಾ ಮತ್ತು ಕಿಷನ್‌ಗಂಜ್‌ನಲ್ಲಿ ಇರಲಿದ್ದು, ನಿರುದ್ಯೋಗ ಸಮಸ್ಯೆ, ಕೃಷಿಕರ ಸಮಸ್ಯೆಗಳು ಮತ್ತು ದುರ್ಬಲ ಆರ್ಥಿಕತೆ ಕುರಿತು ಮಾತನಾಡಲಿದ್ದೇನೆ’ ಎಂದೂ ಅವರು ಹೇಳಿದ್ದಾರೆ.

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದು ಕೆಲವೆಡೆ ಎರಡನೇ ಹಂತದಲ್ಲಿ ಮತದಾನ ನಡೆಯುತ್ತಿದೆ. ನಿಮ್ಮ ಆಯ್ಕೆಯ ಸರ್ಕಾರದ ರಚನೆಗಾಗಿ ತಪ್ಪದೇ ಮತದಾನ ಮಾಡಿ ಎಂದು ಕೋರಿದ್ದಾರೆ.

ಬಿಹಾರ ವಿಧಾನಸಭೆಯ ಸದಸ್ಯ ಬಲ 243 ಆಗಿದ್ದು, ಎರಡನೇ ಹಂತದಲ್ಲಿ 17 ಜಿಲ್ಲೆಗಳಲ್ಲಿ ಹರಡಿಕೊಂಡಿರುವ 94 ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮತದಾನ ನಡೆಯಲಿದೆ. ಸುಮಾರು 1,500 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು