ಭಾನುವಾರ, ನವೆಂಬರ್ 29, 2020
25 °C

ಸಹೋದ್ಯೋಗಿ ಮೇಲೆ ಅತ್ಯಾಚಾರ: ವೈದ್ಯನ ವಿರುದ್ಧ ಪ್ರಕರಣ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಸಹೋದ್ಯೋಗಿಯೊಬ್ಬರ ವಿಡಿಯೊವನ್ನು ವೈರಲ್ ಮಾಡುವುದಾಗಿ ಬೆದರಿಸಿ ಅವರ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸೆಂಟ್ರಲ್ ಮುಂಬೈನ ಆಸ್ಪತ್ರೆಯೊಂದರ 31 ವರ್ಷದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 26 ವರ್ಷದ ಸಂತ್ರಸ್ತೆ, ‘ತನ್ನೊಡನೆ ಅನುಚಿತವಾಗಿ ವರ್ತಿಸಿದ್ದಲ್ಲದೇ, ತನಗೆ ಸಂಬಂಧಿಸಿದ ವಿಡಿಯೊವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿ, ಸುಮಾರು ಒಂದು ವರ್ಷದಿಂದ ಅತ್ಯಾಚಾರವೆಸಗಿದ್ದಾನೆ‘ ಎಂದು ದೂರು ನೀಡಿದ್ದರು. 

ಕಳೆದ ವರ್ಷ ನವೆಂಬರ್‌ನಿಂದ ಈ ವರ್ಷದ ಅಕ್ಟೋಬರ್‌ ನಡುವೆ ಈ ಘಟನೆ ನಡೆದಿದೆ. ಆರೋಪಿ, ಸಂತ್ರಸ್ತೆಯ ಪತಿಗೂ ಬೆದರಿಕೆ ಹಾಕಿದ್ದರು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿ ವೈದ್ಯನ ವಿರುದ್ಧ ಹಲ್ಲೆ, ಅತ್ಯಾಚಾರ ಮತ್ತು ಇತರೆ ಸಂಬಂಧಿತ ಐಪಿಸಿ ಸೆಕ್ಷನ್‌ಗಳ ಅಡಿ ಬೈಕುಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು