ಶನಿವಾರ, ಜುಲೈ 2, 2022
20 °C

ಲಂಡನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ದೆಹಲಿ ನಿವಾಸದಲ್ಲಿ ಆತ್ಮಹತ್ಯೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಲಂಡನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ 40 ವರ್ಷದ ವೈದ್ಯರೊಬ್ಬರು ದಕ್ಷಿಣ ದೆಹಲಿಯ ಗ್ರೇಟರ್ ಕೈಲಾಶ್‌ನಲ್ಲಿರುವ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಮೃತರನ್ನು ಮೇಘಾ ಕಾಯಲ್ ಎಂದು ಗುರುತಿಸಲಾಗಿದ್ದು, ಅವರು ಇತ್ತೀಚೆಗೆ ತನ್ನ 79 ವರ್ಷದ ತಾಯಿಯನ್ನು ಕಳೆದುಕೊಂಡ ನಂತರ ಖಿನ್ನತೆಗೆ ಒಳಗಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಸ್ಥಳದಿಂದ ಡೆತ್ ನೋಟ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ಮೃತರ ತೊಡೆಯ ಮೇಲೆ 'ಸ್ವಯಂ ಮಾಡಿಕೊಂಡಿರುವ ಗಾಯಗಳು' ಕಂಡುಬಂದಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಯಲ್ ಕಳೆದ ಒಂದು ವರ್ಷದಿಂದ ಲಂಡನ್‌ನ ಮಿಲ್ಟನ್ ಕೇನ್ಸ್ ಯೂನಿವರ್ಸಿಟಿ ಆಸ್ಪತ್ರೆಯಲ್ಲಿ ನರವಿಜ್ಞಾನಿಯಾಗಿ ಕೆಲಸ ಮಾಡುತ್ತಿದ್ದರು. ಇದಕ್ಕೂ ಮುನ್ನ ಅವರು ದೆಹಲಿಯ ಸರಿತಾ ವಿಹಾರ್‌ನಲ್ಲಿರುವ ಅಪೋಲೋ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದರು ಎಂದು ಅವರು ಹೇಳಿದರು.

ಅನಾರೋಗ್ಯದಿಂದ ಜ. 27 ರಂದು ತಾಯಿ ಮೃತಪಟ್ಟ ನಂತರ ಕಾಯಲ್ ಖಿನ್ನತೆಗೆ ಒಳಗಾಗಿದ್ದರು ಎಂದು ಕಾಯಲ್ ಅವರ ಅತ್ತಿಗೆ ಪೊಲೀಸರಿಗೆ ತಿಳಿಸಿದ್ದಾರೆ. ಆಕೆಯ ತಂದೆ ಕೂಡ ಕ್ಯಾನ್ಸರ್ ರೋಗಿ ಎಂದು ಪೊಲೀಸರು ತಿಳಿಸಿದ್ದಾರೆ.

ಬೆಳಿಗ್ಗೆ 7.40 ರ ಸುಮಾರಿಗೆ, ಪದೇ ಪದೆ ಕರೆದರೂ ಕಾಯಲ್ ಹೊರಗೆ ಬಾರದ ಹಿನ್ನೆಲೆಯಲ್ಲಿ ನಕಲಿ ಕೀ ಬಳಸಿ ಅವರ ಕೋಣೆಯ ಬಾಗಿಲನ್ನು ತೆಗೆಯಲಾಗಿದೆ.

ಈ ವೇಳೆ ಕೋಣೆಯಲ್ಲಿ ಕಾಯಲ್ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿರುವುದು ಕಂಡುಬಂದಿದೆ. ಆಕೆಯ ತೊಡೆಯ ಮೇಲೆ ಗಾಯಗಳಾಗಿರುವುದು ಕಂಡುಬಂದಿದೆ. ತಕ್ಷಣವೇ, ಕುಟುಂಬ ಸದಸ್ಯರು ಅವರನ್ನು ಅಪೋಲೋ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆ ವೇಳೆಗಾಗಲೇ ಅವರು ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು