ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮ್‌ದೇವ್ ಹೇಳಿಕೆ ಪ್ರತಿಭಟಿಸಿ ಜೂನ್ 1ರಂದು ದೇಶದಾದ್ಯಂತ ವೈದ್ಯರಿಂದ ಕರಾಳ ದಿನ

Last Updated 29 ಮೇ 2021, 16:45 IST
ಅಕ್ಷರ ಗಾತ್ರ

ನವದೆಹಲಿ: ಅಲೋಪಥಿ ಕುರಿತು ಯೋಗಗುರು ಬಾಬಾ ರಾಮ್‌ದೇವ್ ನೀಡಿರುವ ಹೇಳಿಕೆ ಪ್ರತಿಭಟಿಸಿ ದೇಶದಾದ್ಯಂತ ಜೂನ್ 1ರಂದು ಕರಾಳ ದಿನ ಆಚರಿಸಲು ನಿರ್ಧರಿಸಿರುವುದಾಗಿ ವೈದ್ಯರ ಸಂಘಟನೆಗಳ ಒಕ್ಕೂಟ ಹೇಳಿದೆ.

ತಮ್ಮ ಹೇಳಿಕೆಗೆ ರಾಮ್‌ದೇವ್ ಅವರು ಬೇಷರತ್ತಾಗಿ ಸಾರ್ವಜನಿಕವಾಗಿ ಕ್ಷಮೆ ಕೇಳಬೇಕು ಎಂದೂ ಒಕ್ಕೂಟವು ಪ್ರಕಟಣೆಯಲ್ಲಿ ಆಗ್ರಹಿಸಿದೆ.

ಅಲೋಪಥಿಗೆ ಕೊರೊನಾ ವೈರಸ್ ಸಾಂಕ್ರಾಮಿಕ ರೋಗಕ್ಕೆ ಚಿಕಿತ್ಸೆ ನೀಡುವ ಸಾಮರ್ಥ್ಯವಿದೆಯೇ ಎಂಬುದನ್ನು ಪ್ರಶ್ನಿಸಿದ್ದ ರಾಮದೇವ್, ಈ ಚಿಕಿತ್ಸಾ ವಿಧಾನದಿಂದ ಲಕ್ಷಾಂತರ ಮಂದಿ ಸಾಯುವಂತಾಗಿದೆ ಎಂದು ಆರೋಪಿಸಿದ್ದರು. ಇದಕ್ಕೆ ದೇಶದಾದ್ಯಂತ ವ್ಯಾಪಕ ಆಕ್ಷೇಪ ವ್ಯಕ್ತವಾಗಿತ್ತು.

ಈ ಮಧ್ಯೆ, ಉತ್ತರಾಖಂಡದ ಭಾರತೀಯ ವೈದ್ಯಕೀಯ ಮಂಡಳಿಯು (ಐಎಂಎ) ಸಾರ್ವಜನಿಕ ವೇದಿಕೆಯಲ್ಲಿ ಮುಕ್ತ ಚರ್ಚೆಗೆ ಬರುವಂತೆ ರಾಮ್‌ದೇವ್ ಅವರಿಗೆ ಸವಾಲೆಸೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT