ಆಗ್ರಾ: ಇಲ್ಲಿನ ಸರೋಜಿನಿ ನಾಯ್ಡು ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನವಜಾತ ಶಿಶುವೊಂದರಲ್ಲಿ ಕಪ್ಪು ಶಿಲೀಂಧ್ರದ ಸೋಂಕು(ಬ್ಲ್ಯಾಕ್ ಫಂಗಸ್) ಕಂಡು ಬಂದಿರುವುದು ವರದಿಯಾಗಿದೆ.

14 ವರ್ಷದ ಹೆಣ್ಣುಮಗುವನ್ನು ಕಡಿಮೆ ತೂಕ ಹಾಗೂ ಅನಾರೋಗ್ಯದ ಕಾರಣದಿಂದ ಜನನವಾದ ನಂತರ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ನಂತರ ಮಗುವಿನ ಗಲ್ಲದ ಮೇಲೆ ಕಪ್ಪು ಶಿಲೀಂಧ್ರ ಸೋಂಕಿನ ಲಕ್ಷಣ ಕಂಡು ಬಂದಿದ್ದರಿಂದ ಯಶಸ್ವಿಯಾಗಿ ಚಿಕಿತ್ಸೆ ನೀಡಿ ಗುಣಮುಖ ಮಾಡಿದ್ದೇವೆ ಎಂದು ಆಸ್ಪತ್ರೆಯ ವೈದ್ಯ ಅಖಿಲೇಶ್ ಪ್ರತಾಪ್ ಸಿಂಗ್ ಅವರು ತಿಳಿಸಿದ್ದಾರೆ.

ಮಗು ಅಪಾಯದಿಂದ ಪಾರಾಗಿದೆ. ಐಸಿಯುನಿಂದ ಸಾಮಾನ್ಯ ಹಾಸಿಗೆಗೆಸ್ಥಳಾಂತರವಾಗಿದ್ದು ನಿಗಾದಲ್ಲಿದೆ ಎಂದು ಅವರು ತಿಳಿಸಿದ್ದಾರೆ.

ವಿಶೇಷವೆಂದರೆ ಇದೇ ಆಸ್ಪತ್ರೆಯಲ್ಲಿ 5 ಜನ ಕಪ್ಪು ಶಿಲೀಂಧ್ರ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ ಒಬ್ಬ ಮೃತಪಟ್ಟಿದ್ದಾನೆ ಎಂದು ಸಿಂಗ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.