ಮಂಗಳವಾರ, ಏಪ್ರಿಲ್ 20, 2021
31 °C

ವಿದೇಶಿ ಕರೆನ್ಸಿ ಕಳ್ಳಸಾಗಣೆ; ಕಸ್ಟಮ್ಸ್ ವಿರುದ್ಧ ಎಲ್‌ಡಿಎಫ್ ಪ್ರತಿಭಟನೆ

ಪಿಟಿಐ Updated:

ಅಕ್ಷರ ಗಾತ್ರ : | |

ಕೊಚ್ಚಿ: ವಿದೇಶಿ ಕರೆನ್ಸಿ (ಡಾಲರ್) ಕಳ್ಳಸಾಗಣೆ ಪ್ರಕರಣದಲ್ಲಿ ತಮ್ಮ ಪಕ್ಷದ ಪ್ರಮುಖ ನಾಯಕರ ವಿರುದ್ಧ ಕಸ್ಟಮ್ಸ್‌ ಅಧಿಕಾರಿಗಳು ತನಿಖೆ ನಡೆಸುತ್ತಿರುವುದನ್ನು ವಿರೋಧಿಸಿ ಕೇರಳದ ಆಡಳಿತಾರೂಢ ಎಲ್‌ಡಿಎಫ್ ಪಕ್ಷ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಶನಿವಾರ ಇಲ್ಲಿ ಪ್ರತಿಭಟನೆ ನಡೆಸಿತು.

ಕಸ್ಟಮ್ಸ್‌ ಕಚೇರಿವರೆಗೆ ಪ್ರತಿಭಟನೆ ಹಮ್ಮಿಕೊಂಡಿದ್ದ ಸಿಪಿಐ(ಎಂ) ನೇತೃತ್ವದ ಮೈತ್ರಿಕೂಟದ ಕ್ರಮವನ್ನು ಗಂಭೀರವಾಗಿ ಗಮನಿಸಿದ ಕಸ್ಟಮ್ಸ್‌ ಅಧಿಕಾರಿಗಳು, ‘ರಾಜಕೀಯ ಪಕ್ಷವೊಂದು ತನಿಖಾ ಸಂಸ್ಥೆಯನ್ನು ಬೆದರಿಸಲು ಪ್ರಯತ್ನಿಸಿದರೆ ಅದು ಪ್ರಯೋಜನವಾಗುದಿಲ್ಲ‘ ಎಂದು ಸ್ಪಷ್ಟಪಡಿಸಿದೆ.

‘ಬೆದರಿಕೆ ಹಾಕಲು ಪ್ರಯತ್ನಿಸುವ ರಾಜಕೀಯ ಪಕ್ಷವು ಕೆಲಸ ಮಾಡುವುದಿಲ್ಲ‘ ಎಂದು ಕಸ್ಟಮ್ಸ್ (ಪ್ರಿವೆಂಟಿವ್) ಆಯುಕ್ತ ಸುಮಿತ್ ಕುಮಾರ್ ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

ಕಸ್ಟಮ್ಸ್ ಅಧಿಕಾರಿಗಳು ಚಿನ್ನ ಕಳ್ಳಸಾಗಣೆ ಪ್ರಕರಣದ ತನಿಖೆ ನಡೆಸಲು ಆರಂಭಿಸಿದ ನಂತರ ಕೇರಳದಲ್ಲಿ ರಾಜಕೀಯ ಸಮರ ಆರಂಭವಾಗಿದೆ.  ಪ್ರಕರಣದ ಪ್ರಮುಖ ಆರೋಪಿ, ಸ್ವಪ್ನಾ ಸುರೇಶ್, ಈ ಪ್ರಕರಣದಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್, ವಿಧಾನಸಭಾ ಸ್ಪೀಕರ್ ಪಿ.ಶ್ರೀರಾಮಕೃಷ್ಣನ್ ಮತ್ತು ಯುಎಇ ಒಳಗೊಂಡ ಕೆಲವು ಮಂತ್ರಿಗಳ ವಿರುದ್ಧ 'ಆಘಾತಕಾರಿ ಹೇಳಿಕೆ ನೀಡಿದ್ದಾರೆ.  

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.