ಶುಕ್ರವಾರ, ಆಗಸ್ಟ್ 12, 2022
20 °C

ಹೊರ ರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕ‌ ಸರಬರಾಜು ನಿರ್ಬಂಧಿಸಬೇಡಿ: ಕೇಂದ್ರ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಹೊರರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕದ ಸರಬರಾಜಿಗೆ ಯಾವುದೇ ನಿರ್ಬಂಧ ಹಾಕಬೇಡಿ’ ಎಂದು ರಾಜ್ಯಗಳಿಗೆ ಕೇಂದ್ರ ಸರ್ಕಾರ ಶುಕ್ರವಾರ ಸೂಚಿಸಿದೆ. 

ವಿಪತ್ತು ನಿರ್ವಹಣಾ ಕಾಯ್ದೆ 2005 ಅನ್ನು ಉಪಯೋಗಿಸಿಕೊಂಡು ಕೆಲ ರಾಜ್ಯಗಳು, ಹೊರರಾಜ್ಯಗಳಿಗೆ ವೈದ್ಯಕೀಯ ಆಮ್ಲಜನಕ ಸರಬರಾಜು ಮಾಡದಂತೆ ಉತ್ಪಾದಕರಿಗೆ ನಿರ್ಬಂಧ ಹೇರುತ್ತಿರುವ ಕುರಿತು ವರದಿಗಳು ಪ್ರಕಟವಾದ ಬೆನ್ನಲ್ಲೇ ಕೇಂದ್ರ ಸರ್ಕಾರದ ಗೃಹ ಸಚಿವಾಲಯ ಈ ಸೂಚನೆ ನೀಡಿದೆ.

‘ರಾಜ್ಯದೊಳಗಿನ ಆಸ್ಪತ್ರೆಗಳಿಗಷ್ಟೇ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಬೇಕು ಎನ್ನುವ ಆದೇಶ ಮಾಡುವಂತಿಲ್ಲ’ ಎಂದು ಸಚಿವಾಲಯದ ಕಾರ್ಯದರ್ಶಿ ಅಜಯ್‌ ಭಲ್ಲಾ ರಾಜ್ಯಗಳಿಗೆ ಪತ್ರ ಮುಖೇನ ಸೂಚಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು