ಸೋಮವಾರ, ಮಾರ್ಚ್ 27, 2023
33 °C

ರಾಷ್ಟ್ರಪತಿ ಭವನಕ್ಕೆ ಬೇಕಿರುವುದು ಪ್ರತಿಮೆಯಲ್ಲ: ಆರ್‌ಜೆಡಿ ನಾಯಕ ತೇಜಸ್ವಿ ಯಾದವ್

ಪ್ರಜಾವಾಣಿ ವೆಬ್‌ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರಪತಿ ಭವನದಲ್ಲಿ ಇರಬೇಕಾದ್ದು ‘ಮೂರ್ತಿ’ಯಲ್ಲ ಎಂದು ಬಿಹಾರದ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್‌ ಹೇಳಿದ್ದಾರೆ.

ಪಟ್ನಾದಲ್ಲಿ ಮಾತನಾಡಿರುವ ಅವರು, ‘ರಾಷ್ಟ್ರಪತಿ ಭವನದಲ್ಲಿ ಇರಬೇಕಾದ್ದು 'ಮೂರ್ತಿ' (ಪ್ರತಿಮೆ)ಯಲ್ಲ. ಯಶವಂತ್ ಸಿನ್ಹಾ ಅವರು ಮಾತನಾಡುವುದನ್ನು ನೀವು ಕೇಳಿರಬಹುದು. ಆದರೆ ಎನ್‌ಡಿಎ ರಾಷ್ಟ್ರಪತಿ ಅಭ್ಯರ್ಥಿ ಮಾತನಾಡಿಯೇ ಇಲ್ಲ. ಅವರ ಉಮೇದುವಾರಿಕೆ ಘೋಷಣೆಯಾದಾಗಿನಿಂದ ಈ ವರೆಗೆ ಒಂದೇ ಒಂದು ಬಾರಿಯೂ ಅವರು ಮಾಧ್ಯಮಗಳೊಂದಿಗೆ ಮಾತನಾಡಿಲ್ಲ’ ಎಂದು ತೇಜಸ್ವಿ ಹೇಳಿದ್ದಾರೆ.

ಎನ್‌ಡಿಎಯಿಂದ ರಾಷ್ಟ್ರಪತಿ ಚುನಾವಣೆಗೆ ಆದಿವಾಸಿ ಮಹಿಳೆ ದ್ರೌಪದಿ ಮುರ್ಮು ಅವರು ಸ್ಪರ್ಧಿಸಿದ್ದಾರೆ. ಎನ್‌ಡಿಎಯೇತರ ವಿರೋಧ ಪಕ್ಷಗಳು ಯಶವಂತ ಸಿನ್ಹಾ ಅವರನ್ನು ಕಣಕ್ಕಿಳಿಸಿವೆ.

ಜುಲೈ 18ರಂದು ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು, 21ಕ್ಕೆ ಫಲಿತಾಂಶ ಹೊರಬೀಳಲಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು